ಮೈಸೂರು ಗ್ಯಾಂಗ್‍ರೇಪ್ ಪ್ರಕರಣ- ಆರೋಪಿಗಳೆಲ್ಲರೂ ಕೂಲಿಕಾರ್ಮಿಕರು!

ಮೈಸೂರು: ಇಲ್ಲಿನ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಕಾಮುಕರೆಲ್ಲರೂ ಕೂಲಿ ಕಾರ್ಮಿಕರಾಗಿದ್ದಾರೆ ಎನ್ನಲಾಗಿದೆ.

ಪ್ರಕರಣ ಸಂಬಂಧ ಮಹತ್ವದ ಕಾರ್ಯಾಚರಣೆ ನಡೆಸಿರುವ ಪೊಲೀಸರು ಇಂದು ಬೆಳಗ್ಗೆ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಕೃತ್ಯದ ಬಳಿಕ ಆರೋಪಿಗಳು ಹೊರರಾಜ್ಯದಲ್ಲಿ ತಲೆಮರೆಸಿಕೊಂಡಿದ್ದರು. ಇದೀಗ ವೈಜ್ಞಾನಿಕ ಸಾಕ್ಷ್ಯಾಧಾರಗಳ ಮೂಲಕ ಎಲ್ಲಾ ಆರೋಪಿಗಳನ್ನು ಪೊಲೀಸರು ತಮ್ಮ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮೈಸೂರು ಗ್ಯಾಂಗ್‍ರೇಪ್- ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ

ಆರೋಪಿಗಳಲ್ಲಿ ನಾಲ್ವರು ತಮಿಳುನಾಡು ಮೂಲದವರಾದರೆ, ಓರ್ವನನ್ನು ಚಾಮರಾಜನಗರದವನು ಎಂದು ಹೇಳಲಾಗುತ್ತಿದೆ. ಕೃತ್ಯ ನಡೆದ ಸ್ಥಳದಲ್ಲಿ ಆರೋಪಿಗಳು ನಿರಂತರವಾಗಿ ಓಡಾಡುತ್ತಿದ್ದರು. ಇತ್ತ ಯುವಕ ಹಾಗೂ ಯುವತಿ ಮೂರು ದಿನ ಅದೇ ಸ್ಥಳದಲ್ಲಿ ಕುಳಿತುಕೊಂಡು ಮಾತನಾಡುತ್ತಿರುವುದನ್ನು ಗಮನಿಸಿ, ನಾಲ್ಕನೇ ದಿನ ಕಾಮುಕರು ಕೃತ್ಯ ಎಸಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಒಟ್ಟಿನಲ್ಲಿ ಆರೋಪಿಗಳ ಪತ್ತೆಯ ಬಗ್ಗೆ ಇಂದು ಸಂಜೆ ಅಧಿಕೃತವಾಗಿ ಹೊರಬೀಳುವ ಸಾಧ್ಯತೆಗಳಿವೆ. ಈಗಾಗಲೇ ಮೈಸೂರಿಗೆ ತೆರಳುತ್ತಿರುವ ಡಿಜಿಪಿ ಪ್ರವೀಣ್ ಸೂದ್ ಇಂದು ಸಂಜೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾಧ್ಯತೆಗಳಿವೆ.

Source: publictv.in Source link