ಕೋವಿಡ್ ಮಧ್ಯೆಯೂ ಇಂದಿನಿಂದ 3 ದಿನ CET ಪರೀಕ್ಷೆ; 12 ವಿದ್ಯಾರ್ಥಿಗಳಿಗೆ ಸೋಂಕು ದೃಢ

ಕೋವಿಡ್ ಮಧ್ಯೆಯೂ ಇಂದಿನಿಂದ 3 ದಿನ CET ಪರೀಕ್ಷೆ; 12 ವಿದ್ಯಾರ್ಥಿಗಳಿಗೆ ಸೋಂಕು ದೃಢ

ಬೆಂಗಳೂರು: ಕೋವಿಡ್ ನಡುವೆಯೂ ಇಂದಿನಿಂದ 3 ದಿನ ಸಿಇಟಿ ಪರೀಕ್ಷೆ ನಡೆಯಲಿದೆ. ಬೆಳಗ್ಗೆ 10:30ರಿಂದ ಪರೀಕ್ಷೆ ಪ್ರಾರಂಭವಾಗಲಿದ್ದು ಇಂದು ಜೀವಶಾಸ್ತ್ರ ಮತ್ತು ಗಣಿತ ವಿಷಯಗಳಿಗೆ ಪರೀಕ್ಷೆ ನಡೆಯಲಿದೆ. ನಾಳೆ ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರ ವಿಷಯಗಳಿಗೆ ಪರೀಕ್ಷೆ ಇರಲಿದೆ.

ಆ.30ರಂದು ಹೊರನಾಡು & ಗಡಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ನಿಗದಿ ಮಾಡಲಾಗಿದೆ. ರಾಜ್ಯದ ಒಟ್ಟು 530 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು.. ಈ ಪೈಕಿ 86 ಕೇಂದ್ರಗಳು ಬೆಂಗಳೂರಿನಲ್ಲಿವೆ. ಉಳಿದ 444 ಕೇಂದ್ರಗಳು ಇನ್ನುಳಿದ ಜಿಲ್ಲೆಗಳಲ್ಲಿವೆ.
ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದಾರೆ. ಪರೀಕ್ಷೆ ಬರೆಯುವ 12 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ ಎನ್ನಲಾಗಿದೆ. ಈ ಪೈಕಿ 10 ವಿದ್ಯಾರ್ಥಿಗಳು ಬೆಂಗಳೂರು, ಶಿವಮೊಗ್ಗ ಹಾಗೂ ಕೋಲಾರ ತಲಾ ಒಂದು ಕೇಸ್ ಪತ್ತೆಯಾಗಿವೆ.

ಇದನ್ನೂ ಓದಿ: ಇಂದು ಒಂದು ಕೋಟಿ ಮಂದಿಗೆ ವ್ಯಾಕ್ಸಿನೇಷನ್; ಧನ್ಯವಾದ ತಿಳಿಸಿದ ಪ್ರಧಾನಿ ಮೋದಿ

ಕೊರೊನಾ ಸೋಂಕು, ಸೋಂಕಿನ‌ ಲಕ್ಷಣ ಇದ್ದವರಿಗೆ ಪ್ರತ್ಯೇಕ ಕೊಠಡಿ ನೀಡಲಾಗುವುದು. ಪರೀಕ್ಷಾ ಕೇಂದ್ರದ ಐಸೊಲೇಷನ್ ಸೆಂಟರ್ ಪರೀಕ್ಷೆಗೆ ಅನುವು ಮಾಡಿಕೊಡಲಾಗುವುದು. ಪ್ರತೀ ಕೊಠಡಿಗೆ 24 ಅಭ್ಯರ್ಥಿಗಳ ಕೂರಲು ವ್ಯವಸ್ಥೆ ಮಾಡಲಾಗಿದೆ. ಒಂದು ಡೆಸ್ಕ್ ನಲ್ಲಿ ಇಬ್ಬರು ಕೂತು ಪರೀಕ್ಷೆ ಬರೆಯಬಹುದಾಗಿದೆ.

ಕೋವಿಡ್ ಮಾರ್ಗಸೂಚಿ ಅನುಸರಿಸಿ ಸಿಇಟಿ ಪರೀಕ್ಷೆ ನಡೆಯಲಿದೆ. ಒಟ್ಟು 530 ವೀಕ್ಷಕರು, 1060 ವಿಶೇಷ ಜಾಗೃತ ದಳದ ಸದಸ್ಯರು, 530 ಪ್ರಶ್ನೆಪತ್ರಿಕೆ ಪಾಲಕರು, 8409 ಕೊಠಡಿ ಮೇಲ್ವಿಚಾರಕರು ಹಾಗೂ 20,415 ಅಧಿಕಾರಿ ವರ್ಗದ ಸಿಬ್ಬಂದಿಗಳು ಪರೀಕ್ಷಾ ಈ ಕಾರ್ಯಕ್ಕೆ ನಿಯೋಜನೆ ಮಾಡಲಾಗಿದೆ.

ಆ.30ರಂದು 6 ಸ್ಥಳಗಳಲ್ಲಿ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ 1682 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಪ್ರತೀ ಪರೀಕ್ಷಾ ಕೇಂದ್ರದಲ್ಲೂ ಉಚಿತ ಮಾಸ್ಕ್ ವಿತರಣೆ, ವೀಕೆಂಡ್ ಕರ್ಫ್ಯೂ ಇರುವ ಜಿಲ್ಲೆಗಳಲ್ಲಿ ಬಸ್ ವ್ಯವಸ್ಥೆ ಇರಲಿದೆ. ಪರೀಕ್ಷೆಯ ಪ್ರವೇಶ ಪತ್ರ ತೋರಿಸಿ ಸಂಚಾರಕ್ಕೆ ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ.

ವಿದ್ಯಾರ್ಥಿಗಳು ಅನುಸರಿಸಬೇಕಾದ ಕ್ರಮಗಳು
* ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಮಾಸ್ಕ್ ಕಡ್ಡಾಯ
* ಓಎಂಆರ್ ಉತ್ತರ ಪತ್ರಿಕೆಯಲ್ಲಿ ಅಭ್ಯರ್ಥಿಗಳು ತಮ್ಮ ಹೆಸರನ್ನು ಬರೆಯಬೇಕು
* ಅಭ್ಯರ್ಥಿಗಳು ಸಿಇಟಿ ಸಂಖ್ಯೆಯನ್ನು, ಪ್ರಶ್ನೆ ಪತ್ರಿಕೆಯ ವರ್ಷನ್ ಕೋಡ್ ಓ.ಎಂ.ಆರ್. ಉತ್ತರ ಪತ್ರಿಕೆಯಲ್ಲಿ ಬರೆದು ಅದಕ್ಕೆ ಸಂಬಂಧಿಸಿದ ವೃತ್ತಗಳನ್ನು ಸಂಪೂರ್ಣವಾಗಿ ತುಂಬಬೇಕು
* ಓಎಂಆರ್ ಉತ್ತರ ಪತ್ರಿಕೆಯಲ್ಲಿ ಮುದ್ರಿತವಾಗಿರುವ ಪ್ರಶ್ನೆ ಪತ್ರಿಕೆಯ ಕ್ರಮ ಸಂಖ್ಯೆ ಮತ್ತು
* ಪ್ರಶ್ನೆ ಪತ್ರಿಕೆಯಲ್ಲಿರುವ ಕ್ರಮ ಸಂಖ್ಯೆ ಒಂದೇ ಆಗಿರುವುದನ್ನು ಖಾತ್ರಿಪಡಿಸಿಕೊಳ್ಳಬೇಕು
* ಉತ್ತರಗಳನ್ನು OMR ಉತ್ತರ ಪತ್ರಿಕೆಯಲ್ಲಿ ಶೇಡ್ ಮಾಡುವುದರ ಮೂಲಕ ಉತ್ತರಿಸಬೇಕು
* ಪರೀಕ್ಷೆಗೆ Blue/ Black ಬಾಲ್ ಪಾಯಿಂಟ್ ಪೆನ್ ಬಳಸಬೇಕು
* ಅಭ್ಯರ್ಥಿಗಳು ಪರೀಕ್ಷಾ ವೇಳಾಪಟ್ಟಿಯನ್ನು ಗಮನದಲ್ಲಿಟ್ಟುಕೊಳ್ಳುವುದು ಸೂಕ್ತ
* ಪರೀಕ್ಷೆಗೂ ಅರ್ಧ ಗಂಟೆ ಮೊದಲೇ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು
* ಪ್ರವೇಶ ಪತ್ರದ ಜೊತೆಗೆ ಕಾಲೇಜಿನ ಗುರುತಿನ ಚೀಟಿ ಕಡ್ಡಾಯ
* ಪರೀಕ್ಷಾ ಕೊಠಡಿಯೊಳಗೆ ವಾಚ್, ಮೊಬೈಲ್ ನಿಷೇಧ
* ಅಭ್ಯರ್ಥಿಗಳು ಓ.ಎಂ.ಆರ್. ಉತ್ತರ ಹಾಳೆಯಲ್ಲಿ ಎಡಗೈ ಹೆಬ್ಬೆರಳ ಗುರುತನ್ನು ಹಾಕುವಂತಿಲ್ಲ

Source: newsfirstlive.com Source link