ದೇಶದಲ್ಲಿ ಕೊರೊನಾ 3ನೇ ಅಲೆ ಭೀತಿ; ಎಚ್ಚರಿಕೆ ವಹಿಸಿ ಎಂದು ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಪತ್ರ

ದೇಶದಲ್ಲಿ ಕೊರೊನಾ 3ನೇ ಅಲೆ ಭೀತಿ; ಎಚ್ಚರಿಕೆ ವಹಿಸಿ ಎಂದು ರಾಜ್ಯಗಳಿಗೆ ಕೇಂದ್ರ ಗೃಹ ಇಲಾಖೆ ಪತ್ರ

ನವದೆಹಲಿ: ದೇಶದಲ್ಲಿ ಮಾರಕ ಕೊರೋನಾ ಮೂರನೇ ಅಲೆ ಭೀತಿ ಶುರುವಾಗಿದೆ. ಹೀಗಾಗಿ ಕೋವಿಡ್​​ ಸೋಂಕು ತಡೆಗೆ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇಂದ್ರ ಗೃಹ ಇಲಾಖೆ ರಾಜ್ಯಗಳಿಗೆ ಪತ್ರ ಬರೆದಿದೆ.

ಸದ್ಯ ಭಾರತದಲ್ಲಿ ಕೊರೋನಾ ಸೋಂಕು ನಿಯಂತ್ರಣದಲ್ಲಿದೆ. ಕೆಲವು ರಾಜ್ಯಗಳ ಜಿಲ್ಲಾ ಪ್ರದೇಶಗಳಲ್ಲಿ ಸೋಂಕು ಹೆಚ್ಚಾಗಿದೆ. ಹಾಗಾಗಿ ಕೂಡಲೇ ಎಚ್ಚೆತ್ತು ಕೊರೋನಾ‌ ನಿಯಂತ್ರಣಕ್ಕೆ ಎಲ್ಲಾ ರಾಜ್ಯ ಸರ್ಕಾರಗಳು ಕಾರ್ಯಪ್ರವೃತ್ತರಾಗಬೇಕು ಎಂದು ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಬರೆದ ಪತ್ರದಲ್ಲಿ ಆದೇಶಿಸಲಾಗಿದೆ.

ಮುಂಬರುವ ಹಬ್ಬಗಳ ಸಂದರ್ಭದಲ್ಲಿ ರಾಜ್ಯಗಳು ಎಚ್ಚರಿಕೆ ವಹಿಸಬೇಕು. ಜನರು ಸಾರ್ವಜನಿಕವಾಗಿ ಹೆಚ್ಚು ಸೇರದಂತೆ ಕ್ರಮ ವಹಿಸಬೇಕು. ಟೆಸ್ಟ್ – ಟ್ರ್ಯಾಕ್ – ಟ್ರೀಟ್ – ವ್ಯಾಕ್ಸಿನೇಷನ್ ಮೇಲೆ ಹೆಚ್ಚು ಗಮನಹರಿಸಿ. ಕೊರೊನಾ ಮುನ್ನೆಚ್ಚರಿಕೆ ಕ್ರಮಗಳ ಕಡ್ಡಾಯವಾಗಿ ಜಾರಿಯಾಗಬೇಕು. ಸೋಂಕು ಹೆಚ್ಚಾದಲ್ಲಿ ಜಿಲ್ಲಾಡಳಿತವೇ ಹೊಣೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಮೈಸೂರು ಕೇಸ್​​: ಸಂಬಂಧಿಕರ ಮನೆಯಲ್ಲಿ ಅವಿತಿದ್ದರಂತೆ ಶಂಕಿತರು.. ಹೇಗಿತ್ತು ಪೊಲೀಸ್ ಬೇಟೆ?

Source: newsfirstlive.com Source link