ನಿಮ್ಮ ಸಾಧನೆ ಇಡೀ ದೇಶಕ್ಕೆ ಸ್ಪೂರ್ತಿ- ಭವಿನಾ ಪಟೇಲ್​​ಗೆ ಶುಭ ಕೋರಿದ ಪ್ರಧಾನಿ ಮೋದಿ

ನಿಮ್ಮ ಸಾಧನೆ ಇಡೀ ದೇಶಕ್ಕೆ ಸ್ಪೂರ್ತಿ- ಭವಿನಾ ಪಟೇಲ್​​ಗೆ ಶುಭ ಕೋರಿದ ಪ್ರಧಾನಿ ಮೋದಿ

ಪ್ಯಾರಾಲಿಂಪಿಕ್ಸ್​​ ಫೈನಲ್​​ಗೆ ಲಗ್ಗೆಯಿಟ್ಟ ಭವಿನಾ ಪಟೇಲ್​ಗೆ ಶುಭಾಶಯಗಳ ಮಹಾಪುರವೇ ಹರಿದುಬರುತ್ತಿದೆ. ಭವಿನಾ ಪಟೇಲ್​ ಸಾಧನೆಗಾಗಿ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದ್ದಾರೆ. ಇಂದು ನಡೆದ ಸೆಮಿಫೈನಲ್‌ ಪಂದ್ಯದಲ್ಲಿ ಚೀನಾದ ಮಿಯಾವೋ ವಿರುದ್ಧ 3-2 ಸೆಟ್‌ಗಳ ಅಂತರದಿಂದ ಗೆದ್ದ ಭವಿನಾ, ಟೇಬಲ್ ಟೆನ್ನಿಸ್​ನಲ್ಲಿ ಫೈನಲ್‌ಗೇರಿದ ಮೊದಲ ಪ್ಯಾರಾ ಅಥ್ಲೀಟ್‌ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಆ ಮೂಲಕ ಪ್ಯಾರಾಲಿಂಪಿಕ್ಸ್​ನಲ್ಲಿ ಪದಕದ ನಿರೀಕ್ಷೆ ಖಾಯಂಗೊಳಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್‌ ಮಾಡಿದ್ದು, ನಾಳೆ ಚಿನ್ನದ ಪದಕಕ್ಕಾಗಿ ನಡೆಯಲಿರುವ ಫೈನಲ್ ಪಂದ್ಯದ ಗೆಲುವಿಗೆ ಹಾರೈಸಿದ್ದಾರೆ. ಅಭಿನಂದನೆಗಳು ಭವಿನಾ ಪಟೇಲ್. ನೀವು ತುಂಬಾ ಚೆನ್ನಾಗಿ ಆಡಿದಿರಿ. ನಾಳಿನ ಫೈನಲ್‌ನಲ್ಲಿ ನೀವು ಗೆಲುವು ಸಾಧಿಸಲು ಇಡೀ ದೇಶ ಪ್ರಾರ್ಥಿಸುತ್ತಿದೆ. ನಿಮ್ಮ ಗೆಲುವಿಗೆ ಚಿಯರ್ ಮಾಡಲಿದೆ. ಯಾವುದೇ ಒತ್ತಡಕ್ಕೆ ಒಳಗಾಗದೇ ನಿಮ್ಮ ಸಾಮರ್ಥ್ಯಕ್ಕೆ ತಕ್ಕಂತಹ ಪ್ರದರ್ಶನ ತೋರಿ. ನಿಮ್ಮ ಸಾಧನೆ ಇಡೀ ದೇಶಕ್ಕೆ ಸ್ಪೂರ್ತಿ ಎಂದು ಟ್ವೀಟ್‌ ಮಾಡಿದ್ದಾರೆ.

Source: newsfirstlive.com Source link