ಗ್ಯಾಂಗ್​ ರೇಪ್​ ಕೇಸ್​: ಆರೋಪಿಗಳ ಬಂಧಿಸಿದ ಪೊಲೀಸರಿಗೆ ₹1 ಲಕ್ಷ ಬಹುಮಾನ ಘೋಷಿಸಿದ ಜಗ್ಗೇಶ್

ಗ್ಯಾಂಗ್​ ರೇಪ್​ ಕೇಸ್​: ಆರೋಪಿಗಳ ಬಂಧಿಸಿದ ಪೊಲೀಸರಿಗೆ ₹1 ಲಕ್ಷ ಬಹುಮಾನ ಘೋಷಿಸಿದ ಜಗ್ಗೇಶ್

ಬೆಂಗಳೂರು: ಮೈಸೂರಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಐವರು ಆರೋಪಿಗಳನ್ನ ಬಂಧಿಸಿರುವ ಪೊಲೀಸ್ ಅಧಿಕಾರಿಗಳಿಗೆ ನಟ ಜಗ್ಗೇಶ್‌ ₹1ಲಕ್ಷ ಬಹುಮಾನ ಘೋಷಿಸಿದ್ದಾರೆ.

ಇದನ್ನೂ ಓದಿ: ಅತ್ಯಾಚಾರ ಕೇಸ್: ಆರೋಪಿಗಳನ್ನು ಬಂಧಿಸಿದ ಪೊಲೀಸರಿಗೆ​ ₹5ಲಕ್ಷ ಬಹುಮಾನ ಘೋಷಣೆ​

ಈ ಬಗ್ಗೆ ಟ್ವೀಟ್‌ ಮಾಡಿರುವ ಜಗ್ಗೇಶ್​.. ‘ಕಾಲೇಜು ವಿಧ್ಯಾರ್ಥಿನಿಯನ್ನು ಅತ್ಯಾಚಾರ ಮಾಡಿದ ಕಾಮಪಿಪಾಸುಗಳನ್ನು ಬಂಧಿಸಿದ ಕರುನಾಡಿನ ಹೆಮ್ಮೆಯ ಆರಕ್ಷಕರಿಗೆ ನನ್ನ ಅಭಿನಂದನೆಗಳು. ನಮ್ಮ ರಾಜ್ಯದ ಪೊಲೀಸರ ಬಗ್ಗೆ ನನಗೆ ಹೆಮ್ಮೆ ಇದೆ. ನನ್ನ ಕಡೆಯಿಂದ ಪ್ರಕರಣ ಭೇದಿಸಿರುವ ನಲ್ಮೆಯ ಪೊಲೀಸರಿಗೆ ₹1 ಲಕ್ಷ ಬಹುಮಾನ ನೀಡಲಿದ್ದೇನೆ. ನಿಮ್ಮ ಸಾರ್ಥಕ ಸೇವೆ ಹೀಗೆ ಮುಂದುವರಿಯಲಿ. ರಾಷ್ಟ್ರಕ್ಕೆ ಮಾದರಿ ನಮ್ಮ ಪೊಲೀಸ್‌’ ಎಂದು ಬರೆದಿದ್ದಾರೆ.

ಇದನ್ನೂ ಓದಿ: ಮೈಸೂರು ಫೈರಿಂಗ್ ಕೇಸ್​ -ದರೋಡೆಕೋರರ ಹುಡುಕಿ ಕೊಟ್ಟವ್ರಿಗೆ ₹5 ಲಕ್ಷ ಬಹುಮಾನ

ಆಗಸ್ಟ್​ 24 ನೇ ತಾರಿಖು ಮೈಸೂರಿನಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Source: newsfirstlive.com Source link