ಸಿದ್ದರಾಮಯ್ಯ ಸರ್ಕಾರ ಒಂದು ಕಪ್ಪು ಚುಕ್ಕೆ ಇಲ್ಲದೇ ನಡೆದಿದೆ: ಧ್ರುವ ನಾರಾಯಣ

– ಕಾಂಗ್ರೆಸ್‍ಗೆ ಅಭಿವೃದ್ಧಿಯೇ ಮಾನದಂಡ

ಧಾರವಾಡ: ಮಾಜಿ ಸಿಎಂ ಸಿದ್ದರಾಮಯ್ಯ ಸರ್ಕಾರ ಒಂದು ಕಪ್ಪು ಚುಕ್ಕೆ ಕೂಡ ಇಲ್ಲದೇ ನಡೆದಿದೆ ಎಂದು ಕಾಂಗ್ರೆಸ್ ಮಾಜಿ ಸಂಸದ ಧ್ರುವ ನಾರಾಯಣ ಹೇಳಿದರು.

ಗೃಹಸಚಿವ ಅರಗ ಜ್ಞಾನೇಂದ್ರ ಅವರ ಹೇಳಿಕೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅವರಿಗೆ ಅಭಿವೃದ್ಧಿಯೇ ಮಾನದಂಡ. ಸಿದ್ದರಾಮಯ್ಯ ಅವರ ಸರ್ಕಾರ ಒಂದು ಕಪ್ಪು ಚುಕ್ಕೆ ಕೂಡಾ ಇಲ್ಲದೇ ನಡೆದಿದೆ. ಬಿಜೆಪಿಗೆ ಮೊದಲ ಸಲ ಸರ್ಕಾರ ಬಂದಾಗ 3 ಸಿಎಂ ಬದಲಾವಣೆಯಾದರು. 5 ಜನ ಭ್ರಷ್ಟಾಚಾರದಲ್ಲಿ ಸಿಲುಕಿದ್ದರು. ಈಗ ಬಂದಿರುವ ಸರ್ಕಾರದಲ್ಲಿ ಅವರ ಶಾಸಕರೇ ಅವರ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿಕೊಳ್ಳುತ್ತಿದ್ದಾರೆ ಎಂದು ಟೀಕಿಸಿದರು.ಇದನ್ನೂ ಓದಿ: ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿ

ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ನಂತರ ನಾವು ಹೆಚ್ಚು ಗೆದ್ದಿದ್ದು. ದಳ ಹಾಗೂ ಕಾಂಗ್ರೆಸ್ ಒಂದಾದರೆ ಮಾತ್ರ ಪಾಲಿಕೆ ಚುಕ್ಕಾಣಿ ಹಿಡಿಯಬಹುದಾಗಿತ್ತು. ಜೆಡಿಎಸ್ ನಮಗೆ ಅಧಿಕಾರ ಕೂಡಬೇಕಿತ್ತು. ಆದರೆ ಅವರು ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.ಇದನ್ನೂ ಓದಿ:ಪೊಲೀಸರಿಗೆ ಒತ್ತಡ ಇದೆ, ಬೆಳಗ್ಗೆಯಿಂದ ರಾತ್ರಿಯವರೆಗೂ ಕೆಲಸ ಮಾಡ್ತಾರೆ: ಸತೀಶ್ ಜಾರಕಿಹೊಳಿ

ಜಿ.ಟಿ.ದೇವೆಗೌಡರು ಕಾಂಗ್ರೆಸ್‍ಗೆ ಬರುವ ಇಂಗಿತ ವ್ಯಕ್ತಪಡಿಸಿದ್ದಾರೆ. ಅವರು ಬರುವುದು ವರಿಷ್ಟರಿಗೆ ಬಿಟ್ಟ ವಿಚಾರ. ಈಗಾಗಲೇ ಜಿ.ಟಿ.ದೇವೇಗೌಡರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ದಾರೆ ಎಂದು ತಿಳಿಸಿದರು.

Source: publictv.in Source link