ಕಾಬೂಲ್ ವಿಮಾನ ನಿಲ್ದಾಣದ ಎಂಟ್ರಿ ಗೇಟ್ ಬಳಿ ಮತ್ತೆ ಫೈರಿಂಗ್

ಕಾಬೂಲ್: ಅಮೆರಿಕ ಎಚ್ಚರಿಕೆ ನಡುವೆಯೂ ಮತ್ತೆ ಕಾಬೂಲ್ ವಿಮಾನ ನಿಲ್ದಾಣದ ಪ್ರವೇಶದ್ವಾರದ ಬಳಿ ಗುಂಡಿನ ಸದ್ದು ಕೇಳಿದೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಭಯಗೊಂಡ ಜನರು ಚದುರಿದ್ದಾರೆ. ಗುಂಡಿನ ದಾಳಿ ಜೊತೆ ಅಶ್ರುವಾಯು ಪ್ರಯೋಗಿಸಲಾಗಿದೆ ಎಂದು ವರದಿಯಾಗಿದೆ.

ಗುಂಡಿನ ದಾಳಿ ಯಾರು ನಡೆಸಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇದುವರೆಗೂ ಯಾವುದೇ ಉಗ್ರ ಸಂಘಟನೆಗಳು ಘಟನೆ ಹೊಣೆಯನ್ನು ಹೊತ್ತುಕೊಂಡಿಲ್ಲ. ಗುರುವಾರ ನಡೆದ ಬಾಂಬ್ ಸ್ಫೋಟದಲ್ಲಿ 13 ಅಮೆರಿಕ ಸೈನಿಕರು ಸೇರಿದಂತೆ 170 ಜನರು ಪ್ರಾಣ ಕಳೆದುಕೊಂಡಿದ್ದರು.

ಒಂದು ದಿನ ಮುಂಚೆಯೇ ಅಮೆರಿಕ ಉಗ್ರರ ದಾಳಿಯ ಸುಳಿವು ನೀಡಿತ್ತು. ಆದ್ದರಿಂದ ತನ್ನ ದೇಶದ ಜನರಿಗೆ ಕಾಬೂಲ್ ವಿಮಾನ ನಿಲ್ದಾಣದತ್ತ ತೆರಳದಂತೆ ಸೂಚನೆ ನೀಡಿತ್ತು. ಕಾಬೂಲ್ ವಿಮಾನ ನಿಲ್ದಾಣದ ಅಬ್ಬೆ ಗೇಟ್, ಈಸ್ಟ್ ಗೇಟ್ ಮತ್ತು ನಾರ್ಥ್ ಗೇಟ್ ಬಳಿ ದಾಳಿ ನಡೆಯುವ ಸಾಧ್ಯತೆಗಳಿವೆ ಎಂದು ಅಮೆರಿಕ ಎಚ್ಚರಿಕೆ ಸಂದೇಶ ನೀಡಿತ್ತು. ಇದನ್ನೂ ಓದಿ: ಕಾಬೂಲ್‍ನಲ್ಲಿ 3 ಸಾವಿರ ರೂ.ಗೆ ಒಂದು ಬಾಟೆಲ್ ನೀರು, ಪ್ಲೇಟ್ ರೈಸ್‍ಗೆ 7,500 ರೂ.

ಕಾಬೂಲ್ ನಿಂದ ಅಮೆರಿಕ ಸೇನೆ ಹಿಂದಿರುಗುವ ಮೊದಲೇ ಐಎಸ್‍ಐಎಸ್ ದಾಳಿ ನಡೆಸುವ ಎಚ್ಚರಿಕೆಯನ್ನು ಅಧ್ಯಕ್ಷ ಜೋ ಬೈಡನ್ ಎಚ್ಚರಿಸಿದ್ದರು. ಈ ಕುರಿತು ಮಾಹಿತಿ ನೀಡಿರುವ¸ ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಸಾಕಿ, ಕಾಬೂಲ್ ಏರ್ ಪೋರ್ಟ್ ರಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಎಲ್ಲ ಆತಂಕಗಳ ನಡುವೆಯೂ ನಮ್ಮ ಸೈನಿಕರು ಸಂತ್ರಸ್ತರನ್ನು ಏರ್ ಲಿಫ್ಟ್ ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಆದ್ರೆ ಈ ಕಾರ್ಯಾಚರಣೆ ಮುಂದಿನ ದಿನಗಳು ಅಪಾಯಕಾರಿಯಾಗಿರಲಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆದ ಅಫ್ಘಾನ್ ಮಾಜಿ ಸಚಿವ!

blank

ಗುರುವಾರ ಬಾಂಬ್ ದಾಳಿ ಬಳಿಕ ದೇಶ ತೊರೆಯುವವರ ಸಂಖ್ಯೆ ಹೆಚ್ಚಳವಾಗಿದೆ. ಆದ್ದರಿಂದ ತಾಲಿಬಾನಿಗಳನ್ನು ವಿಮಾನ ನಿಲ್ದಾಣದ ಸಮೀಪ ಮತ್ತು ಸಂಪರ್ಕಿಸುವ ಕಲ್ಪಿಸುವ ಮಾರ್ಗಗಳಲ್ಲಿ ಜನರನ್ನು ನೇಮಿಸಿದೆ. ಇತ್ತ ಬ್ರಿಟನ್, ಜರ್ಮನಿ ಸೇರಿದಂತೆ ಹಲವು ದೇಶಗಳು ಏರ್ ಲಿಫ್ಟ್ ಮಾಡೋದನ್ನ ಸ್ಥಗಿತಗೊಳಿಸಿವೆ. ಇತ್ತ ಆಗಸ್ಟ್ 31ರೊಳಗೆ ರಕ್ಷಣಾ ಕಾರ್ಯ ಪೂರ್ಣವಾಗದಿದ್ರೆ ನಮ್ಮ ಕಾರ್ಯಚರಣೆ ಮುಂದುವರಿಯಲಿದೆ ಎಂದು ಅಮೆರಿಕ ಸ್ಪಷ್ಟಪಡಿಸಿದೆ. ಆಗಸ್ಟ್ 31ರೊಳಗೆ ತಮ್ಮ ಸೇನೆಯನ್ನು ಹಿಂಪಡೆಯುವಂತೆ ಅಮೆರಿಕಾಗೆ ತಾಲಿಬಾನಿಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ:  ಐಸಿಸ್-ಕೆ ಉಗ್ರರ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಗುಡುಗು

Source: publictv.in Source link