ದಾವಣಗೆರೆಯಲ್ಲಿ ಸಿಲಿಂಡರ್ ಸ್ಫೋಟ; ಹೊತ್ತಿ ಉರಿದ ಮನೆ

ದಾವಣಗೆರೆಯಲ್ಲಿ ಸಿಲಿಂಡರ್ ಸ್ಫೋಟ; ಹೊತ್ತಿ ಉರಿದ ಮನೆ

ದಾವಣಗೆರೆ: ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಮನೆಯೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಮಾವಿನಹೊಳೆ ಗ್ರಾಮದಲ್ಲಿ ನಡೆದಿದೆ.

ಮನೆಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ನಿವಾಸಿಗಳು ಮನೆಯಿಂದ ಆಚೆ ಓಡಿ ಬಂದು ಜೀವ ಉಳಿಸಿಕೊಂಡಿದ್ದಾರೆ. ಮನೆಯಲ್ಲಿ ವೀಣಾ ಹಾಗೂ ಆಕೆಯ ಇಬ್ಬರು ಮಕ್ಕಳು ಇದ್ದರು. ಆದರೆ ಮನೆ ಸಂಪೂರ್ಣ ಭಸ್ಮವಾಗಿದೆ.

ತುಂಬಿದ ಸಿಲೀಂಡರ್​ಗೆ ಕನೆಕ್ಷನ್ ಕೊಡುವಾಗ ಸಿಲಿಂಡರ್ ಸ್ಫೋಟಗೊಂಡಿದೆ. ಸ್ಥಳಕ್ಕೆ ಅಗ್ನಿಶಾಮಕದಳದ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.

Source: newsfirstlive.com Source link