ಅಪ್ರಾಪ್ತೆಗೆ ಕಿಸ್ ಮಾಡಿ ಪರಾರಿ – ಎಫ್‍ಐಆರ್ ದಾಖಲಿಸುವಂತೆ ಡಿಸಿಪಿ ಸೂಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಗಗಲೇ ನಾಲ್ವರು ಪುಂಡರ ಜೊತೆ ಬಂದಿದ್ದ ಓರ್ವ ಯುವಕ 16 ವರ್ಷದ ಅಪ್ರಾಪ್ತೆಯ ಮೇಲೆ ದಾಳಿ ನಡೆಸಿ ಮುತ್ತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‍ಐಆರ್ ದಾಖಲಿಸಿ ಆರೋಪಿಗಳನ್ನು ಬಂಧಿಸುವಂತೆ ಉತ್ತರ ವಿಭಾಗ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಚಿಕ್ಕಜಾಲ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

ಬೆಂಗಳೂರಿನ ದೊಡ್ಡಬಿದರುಕಲ್ಲು ಬಳಿ ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಅಪ್ರಾಪ್ತೆ ಕಿರುಚಾಡ್ತಿದ್ದಂತೆ ಯುವಕ ಮುತ್ತು ಕೊಟ್ಟು ಪರಾರಿಯಾಗಿದ್ದ. ಮುತ್ತು ನೀಡಿದ್ದು ಅಲ್ಲದೇ ಸೋಮವಾರ ಒಬ್ಬಳೇ ಸಿಗು ಎಂದು ವಾರ್ನಿಂಗ್ ನೀಡಿದ್ದ. ಇದನ್ನೂ ಓದಿ: ಹಾಡಹಗಲೇ ಬೆಂಗಳೂರಿನಲ್ಲಿ ಅಪ್ರಾಪ್ತೆಗೆ ಮುತ್ತಿಟ್ಟ ಯುವಕ

ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಎಫ್ ಐಆರ್ ದಾಖಲಿಸಿ ಆರೋಪಿಗಳನ್ನು ಬಂಧಿಸಿ. ದೂರು ತೆಗೆದುಕೊಳ್ಳದೇ ನಿರ್ಲಕ್ಷ್ಯ ವಹಿಸಿರೋದು ಗೊತ್ತಾದ್ರೆ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರಿಗೆ ಡಿಸಿಪಿ ಖಡಕ್ ಸೂಚನೆ ರವಾನಿಸಿದ್ದಾರೆ.

ಈ ಘಟನೆ ಬಗ್ಗೆ ಸಂಪೂರ್ಣ ವಿವರ ಪಡೆದು ಮುಂದಿನ ಕ್ರಮ ಕೈಗೊಳ್ಳುವುದಾಗಿ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಯಾವುದೇ ರಾಜ್ಯಕ್ಕೆ ಹೋದರೂ ಒಂದೇ ವಾಹನ ನಂಬರ್ – ಈಗಿನ ವ್ಯವಸ್ಥೆ ಹೇಗಿದೆ? ಯಾರಿಗೆ ಸಿಗಲಿದೆ?

Source: publictv.in Source link