ಸಾಮೂಹಿಕ ಅತ್ಯಾಚಾರ: ಆರೋಪಿಗಳ ಎನ್​ಕೌಂಟರ್​ಗೆ ಸರ್ಕಾರ ನಿರ್ದೇಶನ ನೀಡಬೇಕೆಂದ ಸಾ.ರಾ. ಮಹೇಶ್

ಸಾಮೂಹಿಕ ಅತ್ಯಾಚಾರ: ಆರೋಪಿಗಳ ಎನ್​ಕೌಂಟರ್​ಗೆ ಸರ್ಕಾರ ನಿರ್ದೇಶನ ನೀಡಬೇಕೆಂದ ಸಾ.ರಾ. ಮಹೇಶ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿದ್ಯಾರ್ಥಿನಿಯೋರ್ವಳ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸಾ ರಾ ಮಹೇಶ್ ಆರೋಪಿಗಳನ್ನ ಶೂಟೌಟ್ ಮಾಡುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸಾಮೂಹಿಕ ಅತ್ಯಾಚಾರ ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

ಈ ಕುರಿತು ಹೇಳಿಕೆ ನೀಡಿರುವ ಸಾ. ರಾ. ಮಹೇಶ್.. ಕಾನೂನಿನಲ್ಲಿ ತೊಡಕಿರುವುದು ನನಗೂ ಅರಿವಿದೆ. ಆದ್ರೆ ಇಂಥ ಕಹಿ ಘಟನೆಗಳಲ್ಲಿ ಪೊಲೀಸರು ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಬೇಕು. ಎನ್​ಕೌಂಟರ್​ ಮಾಡುವ ದಿಟ್ಟತನವನ್ನ ಪೊಲೀಸ್ ಇಲಾಖೆ ಮೆರೆಯಬೇಕು. ಇದಕ್ಕೆ ರಾಜ್ಯ ಸರ್ಕಾರ ಸೂಕ್ತ ನಿರ್ದೇಶನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಗ್ಯಾಂಗ್ ರೇಪ್ ಕೇಸ್​: ಕೊಟ್ಟ ಮಾತಿನಂತೆ ₹1 ಲಕ್ಷ ಪೊಲೀಸರಿಗೆ ನೀಡಿದ ಜಗ್ಗೇಶ್ ದಂಪತಿ

ನಿನ್ನೆಯಷ್ಟೇ ಪೊಲೀಸರು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಐವರನ್ನು ತಮಿಳುನಾಡಿನಲ್ಲಿ ಬಂಧಿಸಿ ರಾಜ್ಯಕ್ಕೆ ಕರೆತಂದಿದ್ದಾರೆ. ಸದ್ಯ ಐವರನ್ನೂ 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.

Source: newsfirstlive.com Source link