ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿ ಅಪಘಾತ -ಯುವಕ ಸಾವು

ಬೆಂಗಳೂರು: ಕುಡಿದ ಮತ್ತಿನಲ್ಲಿ ಬೈಕ್ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್‍ನಲ್ಲಿ ನಡೆದಿದೆ.

ಅಜಯ್ ಮೃತನಾಗಿದ್ದಾನೆ. ಈತ ನಾಯಕನಹಳ್ಳಿ ಗ್ರಾಮದ ನಿವಾಸಿ ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಬೈಕ್ ಚಲಾಯಿಸಿ ಸಾವನ್ನಪಿದ್ದಾನೆ. ಮುತ್ಯಾಲಮಡು ಪ್ರವಾಸಿ ತಾಣದ ಬಳಿ ಅಪಘಾತ ನಡೆದಿದೆ. ಇದನ್ನೂ ಓದಿ: ಟಿವಿ, ರೇಡಿಯೋಗಳಲ್ಲಿ ಮಹಿಳೆಯ ಧ್ವನಿ ಬ್ಯಾನ್- ತಾಲಿಬಾನ್ ಆದೇಶ

ಅಜಯ್ ನಿನ್ನೆ ಸಂಜೆ ಸ್ನೇಹಿತರ ಜೊತೆ ಪಾರ್ಟಿ ಮಾಡಲೆಂದು ಹೋಗಿದ್ದನು. ರಾತ್ರಿ ಪಾರ್ಟಿ ಮುಗಿಸಿ ಮನೆಗೆ ಬರುತ್ತಿದ್ದ ವೇಳೆ ಮರಕ್ಕೆ ಬೈಕ್ ಹೊಡೆದಿದೆ. ತೀವ್ರ ರಕ್ತಸ್ರಾವದಿಂದ ಅಜಯ್ ಸ್ಥಳದಲ್ಲೆ ಮೃತ ಪಟ್ಟಿದ್ದಾನೆ. ಬೆಳೆಗ್ಗೆ ವೇಳೆ ಅಲ್ಲಿ ಹೋದ ಜನ ಗಮನಿಸಿ ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಆನೇಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Source: publictv.in Source link