ಬಹಳ ಕಡಿಮೆ ಸಮಯದಲ್ಲಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ: ಹಾಲಪ್ಪ ಆಚಾರ್

ಕೊಪ್ಪಳ: ಬಹಳ ಕಡಿಮೆ ಸಮಯದಲ್ಲಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ ಎಂದು ಪೊಲೀಸರನ್ನು ಗಣಿ ಭೂ ವಿಜ್ಞಾನ ಸಚಿವ ಹಾಲಪ್ಪ ಆಚಾರ್ ಪ್ರಶಂಸಿದ್ದಾರೆ.

ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೊಲೀಸ್ ಅಧಿಕಾರಿಗಳು ಉತ್ತಮ ಕೆಲಸ ಮಾಡಿದ್ದಾರೆ. ಬಹಳ ಕಡಿಮೆ ಸಮಯದಲ್ಲಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಈಗ ಸಂತ್ರಸ್ತೆಗೆ ನ್ಯಾಯ ಸಿಗಬೇಕು, ಕಾನೂನು ಪ್ರಕಾರ ಅಪರಾಧಿಗಳಿಗೆ ಶಿಕ್ಷೆ ಆಗಬೇಕೆಂದು ಆಗ್ರಹಿಸಿದ್ದಾರೆ.ಇದನ್ನೂ ಓದಿ:ಜಾತಿ, ಭಾಷೆಯ ವಿಷಬೀಜ ಬಿತ್ತಿ ಅಧಿಕಾರ ಹಿಡಿಯುವ ತಂತ್ರ ಪ್ರಾರಂಭವಾಗಿದೆ: ಈರಣ್ಣ ಕಡಾಡಿ

ಹಾಲಪ್ಪ ಆಚಾರ್‍ಗೆ ಮಕ್ಕಳೇ ಇಲ್ಲ ಎಂದು ಟೀಕಿಸಿದ ಮಾಜಿ ಸಚಿವ ಬಸವರಾಜ್ ರಾಯರೆಡ್ಡಿ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ಆ ವಿಷಯಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆಯನ್ನು ನಾನು ನೀಡುವುದಿಲ್ಲ. ಆ ವಿಷಯಕ್ಕೆ ನಾನು ಕಾಮೆಂಟ್ ಮಾಡಲ್ಲ, ಕಾಮೆಂಟ್ ಮಾಡೋ ಅವಶ್ಯಕತೆ ಇಲ್ಲ. ನಾನು ಅಸಹಾಯಕ ಅಲ್ಲ, ಸಾರ್ವಜನಿಕ ಬದುಕಿನಲ್ಲಿ ಹೇಗೆ ಇರಬೇಕು ಅದೇ ರೀತಿ ಇರುತ್ತೇನೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ಸರ್ಕಾರದಿಂದ ಆದೇಶ ಹೊರಡಿಸಿ ಪುಣ್ಯ ಕಟ್ಟಿಕೊಳ್ಳಿ- ಮಾಜಿ ಸ್ಪೀಕರ್ ವಿರುದ್ಧ ಪೊಲೀಸರ ಆಕ್ರೋಶ

ನಾನು ಆ ವಿಷಯ ಚರ್ಚೆ ಮಾಡೋದಾಗಲಿ, ಕಾಮೆಂಟ್ ಮಾಡೋದಾಗಲಿ ಮಾಡಲ್ಲ. ನಾನು ಸಾರ್ವಜನಿಕ ಜೀವನದಲ್ಲಿ ಇದೀನಿ. ಎಲ್ಲದಕ್ಕೂ ಕಾಮೆಂಟ್ ಮಾಡೋಕೆ ನನಗೆ ರಾಜ್ಯದ ನಾಯಕರು ಜವಾಬ್ದಾರಿ ಕೊಟ್ಟಿಲ್ಲ. ರಾಜ್ಯದ ನಾಯಕರು, ಕ್ಷೇತ್ರದ ಜನ ಬೇರೆ ಜವಾಬ್ದಾರಿ ಕೊಟ್ಟಿದ್ದಾರೆ. ಆ ಕೆಲಸ ಮಾಡ್ತೀನಿ ಎಂದಿದ್ದಾರೆ.ಇದನ್ನೂ ಓದಿ:ಆಚಾರ್ ಕುಟುಂಬದವರಿಗೆ ನೋವುಂಟುಮಾಡುವ ಉದ್ದೇಶವಿರಲಿಲ್ಲ: ಬಸವರಾಜ್ ರಾಯರೆಡ್ಡಿ ವಿಷಾದ

Source: publictv.in Source link