ಹಿಮಾಚಲ ಪ್ರದೇಶದಲ್ಲಿ ಶೇ.100 ರಷ್ಟು ಮೊದಲ ಡೋಸ್ ವ್ಯಾಕ್ಸಿನೇಷನ್; ಪ್ರಧಾನಿ ಮೋದಿ ಶ್ಲಾಘನೆ

ಹಿಮಾಚಲ ಪ್ರದೇಶದಲ್ಲಿ ಶೇ.100 ರಷ್ಟು ಮೊದಲ ಡೋಸ್ ವ್ಯಾಕ್ಸಿನೇಷನ್; ಪ್ರಧಾನಿ ಮೋದಿ ಶ್ಲಾಘನೆ

ನವದೆಹಲಿ: ಹಿಮಾಚಲ ಪ್ರದೇಶವು ಮೊದಲ ಡೋಸ್​ ವ್ಯಾಕ್ಸಿನೇಷನ್​​ನಲ್ಲಿ ಶೇಕಡ 100 ರಷ್ಟು ಪೂರೈಸಿದ ಮೊದಲ ರಾಜ್ಯ ಅನ್ನೋ ಹೆಗ್ಗಳಿಕೆಗೆ ಪಾತ್ರವಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಅಲ್ಲಿನ ಆರೋಗ್ಯ ಸಚಿವ ರಾಜೀವ್​ ಸೈಜಾಲ್​​, ಲಸಿಕೆ ಹಾಕುವಲ್ಲಿ ರಾಜ್ಯದ ಕಾರ್ಯಕ್ಷಮತೆ ಉತ್ತಮವಾಗಿದೆ. 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಪ್ರಕ್ರಿಯೆಯಲ್ಲಿ ನಮ್ಮ ರಾಜ್ಯ ಮೊದಲ ಸ್ಥಾನದಲ್ಲಿದೆ. ಶೇಕಡ 100 ರಷ್ಟು ಮೊದಲ ಡೋಸ್ ವ್ಯಾಕ್ಸಿನೇಷನ್ ಆಗಿದೆ. ನವೆಂಬರ್​​ ತಿಂಗಳ ಒಳಗಾಗಿ ಶೇಕಡಾ 100 ರಷ್ಟು ಎರಡನೇ ಡೋಸ್​​ ಸಹ ನೀಡಲಾಗುವುದು ಅಂತಾ ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಇದುವರೆಗೆ 13 ಲಕ್ಷ ಮಂದಿಗೆ ವ್ಯಾಕ್ಸಿನೇಷನ್ ಆಗಿದೆ. ಅಲ್ಲದೇ ಪ್ರಧಾನಿ ನರೇಂದ್ರ ಮೋದಿ ಅವರು ಹಿಮಾಚಲ ಪ್ರದೇಶದ ಮುಖ್ಯಮಂತ್ರಿ ಹಾಗೂ ಅಲ್ಲಿನ ಕೊರೊನಾ ನಿರ್ವಹಣಾ ಮ್ಯಾನೇಜ್ಮೆಂಟ್​​ಗೆ ಅಭಿನಂದನೆ ಸಲ್ಲಿಸಿದ್ದಾರೆ.

Source: newsfirstlive.com Source link