ಕೇರಳದಿಂದ ಬಂದಿರುವ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು

– ಕೋಲಾರದಲ್ಲಿ ಆತಂಕ

ಕೋಲಾರ: ಕೇರಳದಿಂದ ಬಂದಿರುವ ನರ್ಸಿಂಗ್ ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿದ್ದು, ಕೋಲಾರದಲ್ಲಿ ಆತಂಕ ಹೆಚ್ಚಾಗಿದೆ.

ಕೇರಳದಿಂದ ಬಂದಿದ್ದ 15 ಜನ ನರ್ಸಿಂಗ್ ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗುವ ಮೂಲಕ ಕೋಲಾರದಲ್ಲೂ ಕೊರೊನಾ 3ನೇ ಅಲೆ ಆತಂಕ ಹೆಚ್ಚಾಗಿದೆ. ಎರಡು ದಿನಗಳ ಹಿಂದೆಯಷ್ಟೆ ಯಾವುದೇ ಪರೀಕ್ಷೆಗೊಳಗಾಗದೆ ಕೇರಳದಿಂದ ಬಂದಿದ್ದ 15 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಪತ್ತೆಯಾಗಿರುವುದು ಆರೋಗ್ಯ ಇಲಾಖೆಯನ್ನು ಬೆಚ್ಚಿ ಬೀಳಿಸಿದೆ.ಇದನ್ನೂ ಓದಿ:ಬಹಳ ಕಡಿಮೆ ಸಮಯದಲ್ಲಿ ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ: ಹಾಲಪ್ಪ ಆಚಾರ್

ಕೋಲಾರ ಜಿಲ್ಲೆ ಕೆಜಿಎಫ್ ನಗರದಲ್ಲಿರುವ ನೂರ್ ನೀಸ್ ನರ್ಸಿಂಗ್ ಕಾಲೇಜಿನಲ್ಲಿ ಈ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಈ ಕಾಲೇಜಿನಲ್ಲಿ ಸುಮಾರು 200 ವಿದ್ಯಾರ್ಥಿಗಳಿದ್ದು, ಎಲ್ಲ ವಿದ್ಯಾರ್ಥಿಗಳಲ್ಲಿ ಕೊರೊನಾ ಆತಂಕ ಶುರುವಾಗಿದೆ.

ಕಾಲೇಜಿನ ವಿದ್ಯಾರ್ಥಿಗಳು ಆರೋಗ್ಯವಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ನೂರ್ ನೀಸ್ ನರ್ಸಿಂಗ್ ಕಾಲೇಜನ್ನು ಸೀಲ್‍ಡೌನ್ ಮಾಡಿರುವ ಅಧಿಕಾರಿಗಳು, ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳನ್ನು ತಪಾಸೆಣೆಗೊಳಪಡಿಸಿದ್ದಾರೆ.ಇದನ್ನೂ ಓದಿ:ಸ್ವಾತಂತ್ರ್ಯ ಅಮೃತ ಮಹೋತ್ಸವ ಯುವ ಜನರಲ್ಲಿ ರಾಷ್ಟ್ರೀಯತೆ ಸ್ಫೂರ್ತಿಯನ್ನು ತುಂಬಲು ಪ್ರೇರಕ: ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್

Source: publictv.in Source link