ಮನೆಯಲ್ಲೇ ವೇಶ್ಯಾವಾಟಿಕೆ, ಪೊಲೀಸರ ದಾಳಿ- ಐವರ ಬಂಧನ

ತುಮಕೂರು: ವೇಶ್ಯಾವಾಟಿಕೆ ನಡೆಸುತ್ತಿದ್ದ ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ಐವರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ನಡೆದಿದೆ.

ಕೆಲವು ದಿನಗಳಿಂದ ಮನೆಯಲ್ಲಿ ಅಕ್ರಮವಾಗಿ ವೇಶ್ಯವಾಟಿಕೆ ನಡೆಸಲಾಗುತ್ತಿತ್ತು ಎನ್ನುವ ಖಚಿತ ಮಾಹಿತಿ ಮೇರೆಗೆ ಚಿಕ್ಕನಾಯಕನಹಳ್ಳಿ ಪೋಲಿಸರು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಗೃಹ ಪ್ರವೇಶಕ್ಕೂ ಮುನ್ನವೇ ಮನೆ ಕಳ್ಳತನ

ವೇಶ್ಯವಾಟಿಕೆಯಲ್ಲಿ ತೊಡಗಿದ್ದರು ಎನ್ನಲಾದ ಮೂವರು ಮಹಿಳೆಯರು ಸೇರಿ ಒಟ್ಟು ಐವರನ್ನು ಸದ್ಯ ಬಂಧಿಸಲಾಗಿದೆ. ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

Source: publictv.in Source link