ಗೋವಿಂದಪುರ ಡ್ರಗ್ಸ್​ ಕೇಸ್: ಬೆಳ್ಳಂಬೆಳಗ್ಗೆ ಸೆಲಿಬ್ರಿಟಿಗಳ ಮನೆ ಮೇಲೆ ಪೊಲೀಸ್ ದಾಳಿ

ಗೋವಿಂದಪುರ ಡ್ರಗ್ಸ್​ ಕೇಸ್: ಬೆಳ್ಳಂಬೆಳಗ್ಗೆ ಸೆಲಿಬ್ರಿಟಿಗಳ ಮನೆ ಮೇಲೆ ಪೊಲೀಸ್ ದಾಳಿ

ಬೆಂಗಳೂರು: ಗೋವಿಂದಪುರ ಡ್ರಗ್ಸ್ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಹಲವು ಸೆಲಿಬ್ರಿಟಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪೂರ್ವ ವಿಭಾಗದ ಪೊಲೀಸರಿಂದ ದಾಳಿ ನಡೆದಿದ್ದು ಡಿಜೆ ವಚನ್ ಚಿನ್ನಪ್ಪ, ಉದ್ಯಮಿ ಭರತ್, ಸೆಲೆಬ್ರಿಟಿ ಸೋನಿಯಾ ಅಗರ್ ವಾಲ್ ಮನೆ ಮೇಲೆ ದಾಳಿ ನಡೆದಿದೆ.

ರಾಜಾಜಿನಗರ, ಪದ್ಮನಾಭನಗರದ, ಬೆನ್ಸೆನ್ ಟೌನ್​ನಲ್ಲಿರುವ ಮನೆಗಳ ಮೇಲೆ ದಾಳಿ ನಡೆದಿದ್ದು ಈ ಹಿಂದೆ ಡ್ರಗ್ ಪೆಡ್ಲರ್ ಥಾಮಸ್ ನೀಡಿದ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ ಎಂಬ ಮಾಹಿತಿ ಇದೆ. ಸೆಲೆಬ್ರಿಟಿಗಳ ಮನೆಯಲ್ಲಿ ಪೊಲೀಸರು ಹುಡುಕಾಟ ನಡೆಸ್ತಿದ್ದಾರೆ.. ದಾಳಿ ವೇಳೆ ಡ್ರಗ್ಸ್ ಪತ್ತೆಯಾಗಿರುವ ಶಂಕೆ ಇದೆ.

Source: newsfirstlive.com Source link