ಸರ್ಕಾರಿ ವಾಹನ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ

-ಡಿವೈಎಸ್‍ಪಿ ವೆಂಕಟೇಶ್ ಉಗಿಬಂಡಿ ಸೇರಿ ಇಬ್ಬರಿಗೆ ತೀವ್ರ ಒಳಪೆಟ್ಟು

ಯಾದಗಿರಿ: ಜಿಲ್ಲೆಯ ಸುರಪುರ ಉಪ ವಿಭಾಗದ ಡಿವೈಎಸ್ಪಿ ವೆಂಕಟೇಶ್ ಉಗಿಬಂಡಿಯವರ ಸರ್ಕಾರಿ ವಾಹನ ಮತ್ತು ಲಾರಿ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅದೃಷ್ಟವಶತ್ ಡಿವೈಎಸ್‍ಪಿ ವೆಂಕಟೇಶ್ ಉಗಿಬಂಡಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ:ಡಿಸ್ಕಸ್ ಥ್ರೋ ಬೆಳ್ಳಿ ಪದಕ ಗೆದ್ದ ಯೋಗೇಶ್ ಕಥುನಿಯಾ

ಆದರೆ ಘಟನೆ ವೇಳೆ ಡಿವೈಎಸ್‍ಪಿ ಸೇರಿ ಉಪ ಕಾನ್ಸ್‌ಟೇಬಲ್ ಉಮಾಕಾಂತ್ ಹಾಗೂ ವಾಹನ ಚಾಲಕ ಚಂದಪ್ಪಗೌಡಗೆ ತೀವ್ರ ಒಳಪೆಟ್ಟುಗಳಾಗಿವೆ. ಮೂವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ:ಕುರಿ ಸಂತೆಯಿಂದ ಟ್ರಾಫಿಕ್ ಜಾಮ್ – ಅಂಬುಲೆನ್ಸ್ ಗೂ ಜಾಗ ಬಿಡದ ಜನ

yadagiri accident

ಭಾರೀ ಮಳೆ ಹಿನ್ನೆಲೆ ರಸ್ತೆ ಸರಿಯಾಗಿ ಕಾಣದೇ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಡಿವೈಎಸ್‍ಪಿ ವಾಹನ ಡಿಕ್ಕಿ ಹೊಡೆದಿದೆ. ಬೆಳಗಿನ ಜಾವ 4 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದ್ದು, ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ:ಜೇಬಿನಲ್ಲೇ ಸದಾ ಕಾಂಡೋಮ್ ಇಟ್ಕೊಂಡು ತಿರುಗಾಡುತ್ತಿದ್ದ ಕಾಮುಕ

Source: publictv.in Source link