ಹೋಟೆಲಿನ ವಾಶ್ ರೂಮಿನಲ್ಲಿ ಅವಿತಿದ್ದ ನಟಿ ಸೋನಿಯಾ ವಶಕ್ಕೆ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಸೆಲೆಬ್ರಿಟಿ ಮಾಡೆಲ್ ಸೋನಿಯಾ ಅಗರ್ವಾಲ್‍ಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಐಟಿಸಿ ಗಾರ್ಡೇನಿಯಾ ಹೋಟೆಲ್ ನಲ್ಲಿ ಇದ್ದ ಸೋನಿಯಾಳನ್ನು ವಶಕ್ಕೆ ಪಡೆದಿದ್ದರು. ಕೊಠಡಿಯ ವಾಶ್ ರೂಮ್ ನಲ್ಲಿ ಅವಿತು ಕುಳಿತಿದ್ದ ಬಗ್ಗೆ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಇಂದು ಮಧ್ಯಾಹ್ನ ಹೋಟೆಲಿಗೆ ಹೋಗಿ ಆಕೆಯನ್ನು ವಶಕ್ಕೆ ಪಡೆಯಲಾಗಿದೆ.

ಇಂದು ಬೆಳ್ಳಂಬೆಳಗ್ಗೆ ಸೋನಿಯಾ ಮನೆಯ ಮೇಲೆ ದಾಳಿ ನಡೆಸಿದ ಪೂರ್ವ ವಲಯದ ಪೊಲೀಸರು 40 ಗ್ರಾಂ ಗಾಂಜಾವನ್ನು ವಶಕ್ಕೆ ಪಡೆದಿದ್ದರು. ಡಿಜೆ ಹಳ್ಳಿ ಇನ್ಸ್‍ಪೆಕ್ಟರ್ ನೇತೃತ್ವದಲ್ಲಿ ಈ ದಾಳಿ ನಡೆದಿತ್ತು. ಇದನ್ನೂ ಓದಿ: ನಟಿ ಸೋನಿಯಾ ಮನೆ ಮೇಲೆ ದಾಳಿ – ರಾಜಕಾರಣಿಗಳ ಮಕ್ಕಳಿಗೆ ಶಾಕ್

blank

ದಾಳಿಯ ಸಮಯದಲ್ಲಿ ಸೋನಿಯಾ ಅಗರ್ವಾಲ್ ಮನೆಯಲ್ಲಿ ಇರಲಿಲ್ಲ. ಭಾನವಾರ ರಾತ್ರಿ ಪಾರ್ಟಿಗೆ ಹೋಗಿದ್ದ ಆಕೆ ಮನೆಗೆ ಬಂದಿರಲಿಲ್ಲ. ದಾಳಿ ನಡೆದ ಹಿನ್ನೆಲೆಯಲ್ಲಿ ಪೊಲೀಸರು ಆಕೆಗೆ ಕರೆ ಮಾಡಿದ್ದರು. ಈ ವೇಳೆ ಆಕೆ ಕರೆಯನ್ನು ಸ್ವೀಕರಿಸಿರಲಿಲ್ಲ. ಆ ಬಳಿಕ ಆಕೆಯ ತಂದೆಯಿಂದ ಫೋನ್ ಕರೆ ಮಾಡಿಸಿದ್ದರು. ಈ ವೇಳೆ ಆಕೆ ಮಧ್ಯಾಹ್ನ 12 ಗಂಟೆಗೆ ಬರುವುದಾಗಿ ಹೇಳಿದ್ದಳು.

blank

ಅಗರ್ವಾಲ್ ಮನೆಗೆ ಬಾರದ ಹಿನ್ನೆಲೆಯಲ್ಲಿ ಆಕೆಯ ತಂದೆಯಿಂದ ಕೀ ತೆಗೆಸಿ ಮನೆಯನ್ನು ಜಾಲಾಡಿದ್ದಾರೆ. ಈ ವೇಳೆ 40 ಗ್ರಾಂ ಗಾಂಜಾ ಪತ್ತೆಯಾಗಿತ್ತು. ಇದನ್ನೂ ಓದಿ: ಚೊಚ್ಚಲ ಬಾಲಿವುಡ್ ಸಿನಿಮಾ ಶೂಟಿಂಗ್ ಮುಗಿದ ಖುಷಿಯಲ್ಲಿ ಕೂಡಗಿನ ಕುವರಿ

ಆಗ್ರ್ಯಾನಿಕ್ ಕಾಸ್ಮೆಟಿಕ್ ಕಂಪನಿ ನಡೆಸುತ್ತಿದ್ದ ಸೋನಿಯಾ ಜೊತೆ ಡಜನ್‍ಗಟ್ಟಲೇ ಸೆಲೆಬ್ರಿಟಿಗಳ ಲಿಂಕ್ ಇರುವುದು ಗೊತ್ತಾಗಿದೆ. ಎಲ್ಲಾ ಪಾರ್ಟಿಗಳಲ್ಲಿ ಸೋನಿಯಾ ಅಗರ್ವಾಲ್ ಮುಖಾಂತರ ಸೆಲೆಬ್ರಿಟಿಗಳು ಎಂಟ್ರಿ ಕೊಡುತ್ತಿದ್ದರು.

ಅರೆಸ್ಟ್ ಆಗಿರುವ ವಿದೇಶಿ ಪ್ರಜೆ, ಡ್ರಗ್ ಪೆಡ್ಲರ್ ಥಾಮಸ್ ನಿಂದ ಡ್ರಗ್ಸ್ ಪಡೆದುಕೊಳ್ಳುತ್ತಿದ್ದ ಸೋನಿಯಾ ಆ ಬಳಿಕ ಬೇಕಾದ ಸೆಲೆಬ್ರಿಟಿಗಳಿಗೆ ಪೂರೈಸುತ್ತಿದ್ದ ಬಗ್ಗೆ ಪೊಲೀಸರಿಗೆ ಬಲವಾದ ಸಂಶಯ ಮೂಡಿದೆ. ಕೆಲ ರಾಜಕಾರಣಿಗಳ ಮಕ್ಕಳು ಮತ್ತು ಸ್ಯಾಂಡಲ್‍ವುಡ್‍ನವರ ಜೊತೆ ಸೋನಿಯಾಗೂ ಉತ್ತಮ ಸಂಬಂಧ ಇತ್ತು ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

Source: publictv.in Source link