ಗೋವಿಂದಪುರ ಡ್ರಗ್ಸ್​ ಕೇಸ್: ಸೋನಿಯಾ ಅಗರ್​ವಾಲ್​ ವಶಕ್ಕೆ ಪಡೆದ ಪೊಲೀಸರು

ಗೋವಿಂದಪುರ ಡ್ರಗ್ಸ್​ ಕೇಸ್: ಸೋನಿಯಾ ಅಗರ್​ವಾಲ್​ ವಶಕ್ಕೆ ಪಡೆದ ಪೊಲೀಸರು

ಬೆಂಗಳೂರು: ಗೋವಿಂದಪುರ ಡ್ರಗ್ಸ್ ಲಿಂಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳ್ಳಂಬೆಳಗ್ಗೆ ಪೊಲೀಸರು ಹಲವರ ಮನೆಗಳ ಮೇಲೆ ದಾಳಿ ನಡೆಸಿದ್ದಾರೆ. ಪೂರ್ವ ವಿಭಾಗದ ಪೊಲೀಸರಿಂದ ದಾಳಿ ನಡೆದಿದ್ದು ಡಿ.ಜೆ. ವಚನ್ ಚಿನ್ನಪ್ಪ, ಉದ್ಯಮಿ ಭರತ್, ಸೋನಿಯಾ ಅಗರ್ ವಾಲ್ ಮನೆ ಮೇಲೆ ದಾಳಿ ನಡೆಸಿ ಮೂವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸದ್ಯ ಸೋನಿಯಾ ಅಗರ್​ವಾಲ್​ರನ್ನು ಡಿಜೆ ಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಈ ಮೊದಲು ಬೆಳಿಗ್ಗೆ ಸೋನಿಯಾ ಮನೆಯ ಮೇಲೆ ದಾಳಿ ವೇಳೆ ಸೋನಿಯಾ ಮನೆಯಲ್ಲಿ ಇರಲಿಲ್ಲ. ಹೀಗಾಗಿ ಮಾಹಿತಿ ಕಲೆ ಹಾಕಿದ ಪೊಲೀಸರು ಐಟಿಸಿ ಗಾರ್ಡೇನಿಯಾ ಹೋಟೆಲ್​ಗೆ ತೆರಳಿ ದಾಳಿ ನಡೆಸಿದಾಗ, ಕೊಠಡಿಯ ವಾಶ್ ರೂಮ್ ನಲ್ಲಿ ಅವಿತು ಕುಳಿತಿದ್ದರು ಎನ್ನಲಾಗಿದೆ. ಈ ವೇಳೆ ಸೋನಿಯಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: ಗೋವಿಂದಪುರ ಡ್ರಗ್ಸ್​ ಕೇಸ್: ಬೆಳ್ಳಂಬೆಳಗ್ಗೆ ಸೆಲಿಬ್ರಿಟಿಗಳ ಮನೆ ಮೇಲೆ ಪೊಲೀಸ್ ದಾಳಿ

Source: newsfirstlive.com Source link