ವಿಕ್ರಾಂತ್ ರೋಣ ನಟಿಗೆ ಇಡಿ ವಿಚಾರಣೆ

ಮುಂಬೈ: ಅಕ್ರಮ ಹಣ ವರ್ಗಾವಣೆ ಪ್ರಕರಣವಾಗಿ ವಿಕ್ರಾಂತ್ ರೋಣ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ಗೆ ಇಡಿ ವಿಚಾರಣೆ ಮಾಡಲಾಗಿದೆ.

ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ದೆಹಲಿ ಕಚೇರಿಯಲ್ಲಿ ವಿಚಾರಣೆ ನಡೆಸಿದೆ. ಸತತ ಐದು ಗಂಟೆಗಳ ಕಾಲ ಈ ವಿಚಾರಣೆ ನಡೆದಿದೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಪ್ಯಾರಾಲಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನ- ಜಾವೆಲಿನ್ ಎಸೆದು ಚಿನ್ನ ಪಡೆದ ಸುಮಿತ್

ಸುಕೇಶ್ ಚಂದ್ರಶೇಖರ್ ನಡೆಸುತ್ತಿದ್ದ ಸುಲಿಗೆ ಜಾಲವು ಇತ್ತೀಚೆ ಪತ್ತೆ ಆಗಿತ್ತು. ಇದಕ್ಕೆ ಸಂಬಂಧಿಸಿ ಜಾಕ್ವೆಲಿನ್ ಅವರನ್ನು ವಿಚಾರಣೆಗೆ ಕರೆಯಲಾಗಿತ್ತು. ಜಾಕ್ವೆಲಿನ್ ಅವರು ಆರೋಪಿ ಎಂದು ಈ ಪ್ರಕರಣದಲ್ಲಿ ವಿಚಾರಣೆಗೆ ಒಳಪಡಲಿಲ್ಲ. ಸುಕೇಶ್ ನಡೆಸುತ್ತಿದ್ದ ಪ್ರಕರಣದಲ್ಲಿ ಸಾಕ್ಷ್ಯ ಎನ್ನುವ ರೀತಿಯಲ್ಲಿ ವಿಚಾರಣೆ ಎದುರಿಸಿದ್ದಾರೆ ಎಂದು ತಿಳಿದು ಬಂದಿದೆ.

ಸುಕೇಶ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣ ಕೇಳಿ ಬಂದಿದೆ. ಇದಕ್ಕೆ ಸಂಬಂಧಿಸಿದಂತೆ ಚೆನ್ನೈನಲ್ಲಿರುವ ಬಂಗಲೆಯಿಂದ 82.5 ಲಕ್ಷ ರೂಪಾಯಿ ಹಾಗೂ 12ಕ್ಕೂ ಹೆಚ್ಚು ಐಷಾರಾಮಿ ಕಾರನ್ನು ವಶಕ್ಕೆ ಪಡೆಯಲಾಗಿತ್ತು. ಸುಕೇಶ್ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದಾನೆ.

Source: publictv.in Source link