ಮೊಬೈಲ್‍ಗೆ ಕಿತ್ತಾಟ-ಹೆಣ್ಣು ಮಕ್ಕಳನ್ನು ಬಾವಿಗೆ ತಳ್ಳಿ ತಾಯಿ ಸಾವು

ಭೋಪಾಲ್: ಅತ್ತೆಯ ಜೊತೆಗೆ ಮೊಬೈಲ್ ವಿಷಯಕ್ಕೆ ಜಗಳವಾಡಿದ ಸೊಸೆ ತನ್ನ ಇಬ್ಬರು ಮಕ್ಕಳನ್ನು ಬಾವಿಗೆಸೆದು, ತಾನು ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ಮಧ್ಯಪ್ರದೇಶದ ಚತರ್​ಪುರದ ಹಳ್ಳಿಯೊಂದರಲ್ಲಿ ನಡೆದಿದೆ.

ಇಬ್ಬರು ಹೆಣ್ಣುಮಕ್ಕಳನ್ನು ಬಾವಿಗೆ ತಳ್ಳಿ,ತಾಯಿ ತಾನು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮಹಿಳೆ ತನ್ನ 10 ಮತ್ತು 4 ವರ್ಷದ ಇಬ್ಬರು ಹೆಣ್ಣುಮಕ್ಕಳನ್ನು ಬಾವಿಗೆ ಹಾಕಿ, ನಂತರ ತಾನು ನೇಣು ಬಿಗಿದುಕೊಂಡಿದ್ದಾಳೆ. ಅದೃಷ್ಟವಶಾತ್ ಆ ಇಬ್ಬರು ಹೆಣ್ಣುಮಕ್ಕಳು ಬಾವಿಯ ಕಲ್ಲಿನ ಸಂದಿಯಲ್ಲಿ ಸಿಕ್ಕಿಹಾಕಿಕೊಂಡು ಪ್ರಾಣಾಪಾಯದಿಂದ ಬಚಾವಾಗಿದ್ದಾರೆ. ಇದನ್ನೂ ಓದಿ: ಪುಟಾಣಿ ಕೃಷ್ಣನನ್ನು ಎತ್ತಿಕೊಂಡ ರಾಧಿಕಾ

ಮೃತಳ ಅತ್ತೆ ಆಕೆಯ ಮೊಬೈಲ್ ಫೋನನ್ನು ಕಿತ್ತುಕೊಂಡಿದ್ದರು. ಇದರಿಂದ ಕೋಪಗೊಂಡಿದ್ದ ಆಕೆ ಅತ್ತೆಯೊಂದಿಗೆ ಜಗಳವಾಡಿದ್ದಳು. ಇದೇ ವಿಷಯ ದೊಡ್ಡದಾಗಿ ಕೋಪಗೊಂಡ ಆಕೆ ಮರುದಿನ ತನ್ನಿಬ್ಬರು ಮಕ್ಕಳನ್ನು ಕರೆದುಕೊಂಡು ತೋಟದ ಮನೆಗೆ ಹೋಗಿದ್ದಾಳೆ. ಅಲ್ಲಿ ಮಕ್ಕಳನ್ನು ಬಾವಿಗೆ ತಳ್ಳಿ ಆನು ಮನೆಗೆ ಬಂದು ನೇಣು ಹಾಕಿಕೊಂಡಿದ್ದಾಳೆ ಎಂದು ಸ್ಥಳೀಯರು ಪೋಲೀಸರಿಗೆ ಮಾಹಿತಿ ನೀಡಿದ್ದಾರೆ.

Source: publictv.in Source link