ಮಧ್ಯರಾತ್ರಿ ಬೆಂಗಳೂರಲ್ಲಿ ಭೀಕರ ಆ್ಯಕ್ಸಿಡೆಂಟ್.. 7 ಮಂದಿ ಸಾವು

ಮಧ್ಯರಾತ್ರಿ ಬೆಂಗಳೂರಲ್ಲಿ ಭೀಕರ ಆ್ಯಕ್ಸಿಡೆಂಟ್.. 7 ಮಂದಿ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತವಾಗಿದ್ದು, ಒಟ್ಟು 7 ಜನ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಕೋರಮಂಗಲದ, ಮಂಗಳ ಕಲ್ಯಾಣಮಂಟಪದ ಬಳಿ ಈ ದುರ್ಘಟನೆ ನಡೆದಿದೆ. ರಾತ್ರಿ 1:30ರ ಸುಮಾರಿಗೆ ವೇಗವಾಗಿ ಬಂದ ಆಡಿ ಕ್ಯೂ 3 ಕಾರ್​, ಫುಟ್ ಪಾತ್ ಮೇಲಿದ್ದ ಕಂಬಕ್ಕೆ ರಭಸವಾಗಿ ಢಿಕ್ಕಿ ಹೊಡೆದಿದೆ. ಕಂಬಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಆಡಿ ಕಾರು ಕಟ್ಟಡಕ್ಕೆ ಅಪ್ಪಳಿಸಿದ್ದು 6 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಿಕ್ಕ ಒಬ್ಬರನ್ನ ತಕ್ಷಣ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಿದ್ದಾರೆ. ಆದ್ರರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

Source: newsfirstlive.com Source link