ಲಾರಿ ರಿಪೇರಿ ಮಾಡುತ್ತಿದ್ದವರಿಗೆ ಪಿಕಪ್ ಡಿಕ್ಕಿ- ಮೂವರು ಸಾವು

ಮಂಗಳೂರು: ಕೆಟ್ಟು ರಸ್ತೆ ಬದಿ ನಿಂತಿದ್ದ ಲಾರಿಯನ್ನು ರಿಪೇರಿ ಮಾಡುತ್ತಿದ್ದವರಿಗೆ ಯಮಸ್ವರೂಪಿಯಾಗಿ ಬಂದ ಬೊಲೆರೊ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೆಕ್ಯಾನಿಕ್ ಗಳು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿಯ ಬೆದ್ರೋಡಿಯಲ್ಲಿ ನಡೆದಿದೆ.

ಆಂಧ್ರ ಪ್ರದೇಶ ಮೂಲದ ಲಾರಿ ಹೆದ್ದಾರಿಯಲ್ಲಿ ಕೆಟ್ಟು ನಿಂತಿದ್ದು, ಮೆಕ್ಯಾನಿಕ್‍ಗಳು ಅದನ್ನು ರಿಪೇರಿ ಮಾಡುತ್ತಿದ್ದ ವೇಳೆ ಅತಿ ವೇಗವಾಗಿ ಬಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಮೂವರೂ ರಸ್ತೆಗೆ ಎಸೆಯಲ್ಪಟ್ಟಿದ್ದು, ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕೋರಮಂಗಲದಲ್ಲಿ ಭೀಕರ ರಸ್ತೆ ಅಪಘಾತಕ್ಕೆ 7 ಮಂದಿ ಬಲಿ

ಮೃತರನ್ನು ಆಂಧ್ರ ಪ್ರದೇಶ ಮೂಲದವರು ಎಂದು ಗುರುತಿಸಲಾಗಿದ್ದು, ಹೆಚ್ಚಿನ ಮಾಹಿತಿ ತಿಳಿದಿಲ್ಲ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ತನಿಖೆ ಕೈಗೊಂಡಿದ್ದಾರೆ.

Source: publictv.in Source link