ಮನೆ ಮೇಲ್ಛಾವಣಿ, ಗೋಡೆ ಕುಸಿತ- ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ಚಿತ್ರದುರ್ಗ: ಕೆಲ ದಿನಗಳಿಂದ ತುಂತುರು ಮಳೆಯಿಂದಾಗಿ, ನೆನೆದಿದ್ದ ಮನೆಯ ಮೇಲ್ಛಾವಣಿ ಹಾಗೂ ಗೋಡೆ ಕುಸಿತವಾಗಿರುವ ಘಟನೆ ಜಿಲ್ಲೆಯ ಹೊಳಲ್ಕೆರೆ ಪಟ್ಟಣದಲ್ಲಿ ನಡೆದಿದೆ.

ಹೊಳಲ್ಕೆರೆಯ ಟಿಪ್ಪು ನಗರದ 1ನೇ ಕ್ರಾಸ್ ನಲ್ಲಿರುವ ಮುಮ್ತಾಜ್ ಅವರ ಮನೆ ದಿಡೀರ್ ಕುಸಿದಿದ್ದು, ಅದೃಷ್ಟವಶಾತ್ ಮನೆಯಲ್ಲಿದ್ದ ಮಹಿಳೆ ಮಮ್ತಾಜ್ ಹಾಗೂ ಅವರ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಕೋರಮಂಗಲದಲ್ಲಿ ಭೀಕರ ಅಪಘಾತ – ಹೊಸೂರು ಶಾಸಕನ ಪುತ್ರ ಸಾವು

ಮನೆ ಕಳೆದುಕೊಂಡು ಕಂಗಾಲಾಗಿರುವ ಕುಟುಂಬ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಸರ್ಕಾರ ನಮಗೆ ಶೀಘ್ರ ಪರಿಹಾರ, ವಸತಿ ಸೌಲಭ್ಯ ಕಲ್ಪಿಸಬೇಕು ಎಂದು ಮುಮ್ತಾಜ್ ಆಗ್ರಹಿಸಿದ್ದಾರೆ. ಹೊಳಲ್ಕೆರೆ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Source: publictv.in Source link