ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ ಯತ್ನ- ಯುವಕನಿಂದ ರಕ್ಷಣೆ

ಮಂಡ್ಯ: ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವೃದ್ಧೆಯನ್ನು ಯುವಕ ಕಾಪಾಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ಜರುಗಿದೆ. ಇದನ್ನೂ ಓದಿ: ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ. ಸಮುದಾಯ ನಿಧಿ

ಆಂಧ್ರಪ್ರದೇಶ ಮೂಲದ 64 ವರ್ಷದ ವೃದ್ಧೆ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಇಂದು ಬೆಳಗ್ಗೆ ವೃದ್ಧೆ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ದೃಶ್ಯ ಕಂಡ ಸ್ಥಳೀಯ ಯುವಕ ವೇಣುಗೋಪಾಲ್ ನೀರಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆಯನ್ನು ಕಾಪಾಡಿದ್ದಾರೆ. ಇದನ್ನೂ ಓದಿ:ಮನೆ ಮೇಲ್ಛಾವಣಿ, ಗೋಡೆ ಕುಸಿತ- ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು

ನಂತರ ರಕ್ಷಣೆಗೆ ಒಳಗೊಂಡ ವೃದ್ಧೆಯನ್ನು ಯುವಕ ಹಾಗೂ ಸ್ಥಳೀಯರು ಪೊಲೀಸರ ವಶಕ್ಕೆ ನೀಡಿದ್ದಾರೆ. ನಂತರ ವೃದ್ಧೆಯನ್ನು ವಿಚಾರಣೆ ಒಳಪಡಿಸಿದಾಗ ವೃದ್ಧೆ ಆಂಧ್ರಪ್ರದೇಶದ ಮೂಲದವರಾಗಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಪೊಲೀಸರು ವೃದ್ಧೆಗೆ ಬುದ್ಧಿವಾದ ಹೇಳಿ ಪಂಪ್‍ಹೌಸ್ ಬಳಿಯ ವೃದ್ಧಾಶ್ರಮಕ್ಕೆ ಬಿಟ್ಟಿದ್ದಾರೆ. ಇನ್ನೂ ವೃದ್ಧೆಯನ್ನು ರಕ್ಷಣೆ ಮಾಡಿದ ಯುವಕನಿಗೆ ಪೊಲೀಸರು ಹಾಗೂ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

Source: publictv.in Source link