ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; 6 ನೇ ಆರೋಪಿಯನ್ನೂ ಬಂಧಿಸಿದ ಪೊಲೀಸ್

ಮೈಸೂರು ಸಾಮೂಹಿಕ ಅತ್ಯಾಚಾರ ಪ್ರಕರಣ; 6 ನೇ ಆರೋಪಿಯನ್ನೂ ಬಂಧಿಸಿದ ಪೊಲೀಸ್

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗ್ಯಾಂಗ್ ರೇಪ್‌ ಪ್ರಕರಣಕ್ಕೆ ಸಂಬಂಧಿಸಿದಂತೆ 6 ನೇ ಆರೋಪಿಯನ್ನೂ ಸಹ ಪೊಲೀಸರು ಬಂಧಿಸಿದ್ದಾರೆ.

ಘಟನೆ ನಡೆದ 4 ದಿನಗಳ ಬಳಿಕ 5 ಮಂದಿ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದರು.. ಬಂಧನ ಕಾರ್ಯಾಚರಣೆ ವೇಳೆ ಓರ್ವ ಆರೋಪಿ ಎಸ್ಕೇಪ್ ಆಗಿದ್ದ. ನಿನ್ನೆ ತಡರಾತ್ರಿ ತಮಿಳುನಾಡು ಪೊಲೀಸರ ಸಹಾಯದಿಂದ ಮೈಸೂರು ಪೊಲೀಸರು ಆರೋಪಿಯನ್ನ ಮೈಸೂರು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ಆರು ಮಂದಿ ಕೃತ್ಯದಲ್ಲಿ ಭಾಗಿಯಾಗಿದ್ರು ಎಂದು ಸುದ್ದಿಗೋಷ್ಠಿಯಲ್ಲಿ ಡಿಜಿ/ಐಜಿಪಿ ಪ್ರವೀಣ್ ಸೂದ್ ಮಾಹಿತಿ ನೀಡಿದ್ದರು. ವಿಚಾರಣೆ ವೇಳೆ 7 ಮಂದಿ ಈ ಕೃತ್ಯದಲ್ಲಿ ಭಾಗಿಯಾಗಿದ್ದಾಗಿ ಆರೋಪಿಗಳು ಬಾಯ್ಬಿಟ್ಟಿದ್ದಾರೆ ಎನ್ನಲಾಗಿದೆ. ಏಳನೇ ಆರೋಪಿಗಗಿ ಪೊಲೀಸರು ಶೋಧಕಾರ್ಯ ಮುಂದುವರೆಸಿದ್ದಾರೆ ಎನ್ನಲಾಗಿದೆ.

Source: newsfirstlive.com Source link