ಹಾಡಹಗಲೇ 50 ಮೀಟರ್​​ ಅಟ್ಟಾಡಿಸಿ ಮಾರಾಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆಗೈದ ಹಂತಕರು

ಹಾಡಹಗಲೇ 50 ಮೀಟರ್​​ ಅಟ್ಟಾಡಿಸಿ ಮಾರಾಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಕೊಲೆಗೈದ ಹಂತಕರು

ಬೆಂಗಳೂರು: ಕಿಡಿಗೇಡಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ತೀವ್ರ ಹಲ್ಲೆ ಮಾಡಿ ವ್ಯಕ್ತಿಯೋರ್ವನನ್ನು ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾರಾಕಾಸ್ತ್ರಗಳಿಂದ ಹಲ್ಲೆಗೀಡಾಗಿ ಹತ್ಯೆಯಾದ ವ್ಯಕ್ತಿಯನ್ನು ರವಿ ಎಂದು ಗುರುತಿಸಲಾಗಿದೆ.

ಬಾಣಸವಾಡಿ ನಿವಾಸಿ ರವಿ ಹಾಲು ವ್ಯಾಪಾರಿ. ಯಾರದ್ದೋ ಕರೆ ಬಂದಿದೆ ಎಂದು ರವಿ ಬೈಕ್​​ನಲ್ಲಿ ಅಂಗಡಿ ಬಳಿ ಬಂದಿದ್ದ. ಈ ವೇಳೆ ಟೀ ಕುಡಿಯುತ್ತಿದ್ದಾಗ ರವಿಯನ್ನು ನಿರ್ಜನ ಪ್ರದೇಶಕ್ಕೆ ಕರೆದು ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿದೆ.

ಸುಮಾರು 50 ಮೀಟರ್ ಅಟ್ಟಾಡಿಸಿಕೊಂಡು ಹಲ್ಲೆ ಮಾಡಲಾಗಿದೆ. ತೀವ್ರ ಗಾಯಗೊಂಡ ರವಿಯನ್ನು ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈಗ ಚಿಕಿತ್ಸೆ ಫಲಕಾರಿಯಾಗದೆ ರವಿ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಅಮಾನವೀಯ ಕೃತ್ಯದ ಆರೋಪ; ಗಂಡ ಮಾಡಿದ ಸಾಲಕ್ಕೆ ಹೆಂಡತಿ ಒತ್ತೆಯಾಳಾಗಿ ಇಟ್ಟುಕೊಂಡ ಫೈನಾನ್ಸರ್

ಕೆ.ಜಿ ಹಳ್ಳಿಯ ಸಂಡೇ ಮಾರ್ಕೆಟ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಇಂದು ಮಧ್ಯಾಹ್ನ 12 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ಕೆ.ಜಿ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಉದ್ದೇಶಪೂರ್ವಕವಾಗಿ ರವಿ ಕೊಲೆ ಮಾಡಲಾಗಿದೆ ಎಂಬ ಶಂಕೆ ವ್ಯಕ್ತವಾಗಿದೆ.

Source: newsfirstlive.com Source link