ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್​​ಗೆ ಬೀಳ್ಕೋಡುಗೆ

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್​​ಗೆ ಬೀಳ್ಕೋಡುಗೆ

ಉಡುಪಿ: ಜಿಲ್ಲೆಯಲ್ಲಿ ಎರಡು ವರ್ಷಗಳ ಕಾಲ ಜಿಲ್ಲಾಧಿಕಾರಿಯಾಗಿ ಸೇವೆ ಸಲ್ಲಿಸಿ ವರ್ಗಾವಣೆಯಾಗಿರುವ ಜಿ.ಜಗದೀಶ್ ಅವರಿಗೆ ಬೀಳ್ಕೊಡುಗೆ ಸಮಾರಂಭ ನಡೆಯಿತು.

ಜಿಲ್ಲಾಧಿಕಾರಿ ಕಚೇರಿಯ ಅಟಲ್​ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ, ಶಾಸಕರು ಜನಪ್ರತಿನಿಧಿಗಳು ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು. ಕೊರೊನಾ ಕಾಲಘಟ್ಟದಲ್ಲಿ, ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಿದ ಜಿಲ್ಲಾಧಿಕಾರಿಗಳ ಕಾರ್ಯತತ್ಪರತೆಯನ್ನು ಈ ವೇಳೆ ಶ್ಲಾಘಿಸಲಾಯ್ತು. ಉಡುಪಿಯಲ್ಲಿ ಜಿಲ್ಲಾಧಿಕಾರಿಯಾಗಿ 2 ವರ್ಷ ಸೇವೆ ಸಲ್ಲಿಸಿ ಇದೀಗ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ಅವರ ಜಂಟಿ ಕಾರ್ಯದರ್ಶಿಯಾಗಿ ಜಗದೀಶ್ ವರ್ಗಾವಣೆ ಆಗಿದ್ದಾರೆ.

Source: newsfirstlive.com Source link