ಮೈಸೂರು ಗ್ಯಾಂಗ್‍ರೇಪ್‍ನ 6ನೇ ಕಾಮುಕನ ಅರೆಸ್ಟ್ – ಆರೋಪಿಗಳ ಮಂಪರು ಪರೀಕ್ಷೆಗೆ ಚಿಂತನೆ

ಮೈಸೂರು: ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಧ್ಯರಾತ್ರಿ ಬಂಧಿಸಲಾಗಿದೆ. ಈವರೆಗೆ ಪ್ರಕರಣದ 6 ಕಾಮುಕರು ಅಂದರ್ ಆಗಿದ್ದಾರೆ. ಇನ್ನೋರ್ವನಿಗಾಗಿ ಶೋಧ ಮುಂದುವರಿದಿದೆ.

ಆರೋಪಿಗಳ ಮಂಪರು ಪರೀಕ್ಷೆಗೆ ಪೊಲೀಸರು ಚಿಂತನೆ ನಡೆಸಿದ್ದಾರೆ. ವೈಜ್ಞಾನಿಕ ಸಾಕ್ಷ್ಯ ಸಂಗ್ರಹಕ್ಕೆ ನ್ಯಾಯಾಲಯದಿಂದ ಅನುಮತಿ ಪಡೆಯುವ ಸಾಧ್ಯತೆ ಇದೆ. ಮುಂಬೈಗೆ ತೆರಳಿರುವ ಸಂತ್ರಸ್ತೆಯಿಂದ ತನಿಖೆಗೆ ಸಹಕಾರ ಸಿಗ್ತಿಲ್ಲ. ಸಂತ್ರಸ್ತೆ ಪೋಷಕರೂ ಕೂಡ ಸಂಪರ್ಕಕ್ಕೆ ಸಿಗ್ತಿಲ್ಲ. ಹಾಗಂತ ಒತ್ತಡ ಹಾಕೋದು ಸರಿಯಲ್ಲ. ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸ್ತೇವೆ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಅತ್ಯಾಚಾರ ಪ್ರಕರಣದಲ್ಲಿ ಮೈಸೂರು ಪೊಲೀಸರ ತಲೆದಂಡ ಇಲ್ಲ ಅಂತ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟಪಡಿಸಿದ್ರು. ಈ ಮಧ್ಯೆ ನಾಳೆ ಕೃತ್ಯ ನಡೆದ ಸ್ಥಳಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

ಈ ನಟೋರಿಯಸ್‍ಗಳು ಮೈಸೂರಿನ ಜನನಿಬಿಡ ಸ್ಥಳಗಳಲ್ಲಿ ಹಿಂದೆಯೂ ರಾಬರಿ, ಸರಗಳ್ಳತನ ಸೇರಿದಂತೆ ಇನ್ನಿತರ ಪ್ರಕರಣಗಳನ್ನು ನಡೆಸಿದ್ದು, ಹಣ, ಚಿನ್ನಾಭರಣಗಳನ್ನು ಕಳೆದುಕೊಂಡವರು ಮರ್ಯಾದೆಗೆ ಅಂಜಿ ದೂರು ನೀಡುತ್ತಿರಲಿಲ್ಲ. ಆರೋಪಿಗಳು ಅದನ್ನೆ ಪ್ಲಸ್ ಪಾಯಿಂಟ್ ಮಾಡಿಕೊಂಡು ಇಂತಹ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದರು ಎಂಬ ಸಂಗತಿ ವಿಚಾರಣೆಯ ವೇಳೆ ತಿಳಿದುಬಂದಿದೆ. ಇದನ್ನೂ ಓದಿ: ಜೇಬಿನಲ್ಲೇ ಸದಾ ಕಾಂಡೋಮ್ ಇಟ್ಕೊಂಡು ತಿರುಗಾಡುತ್ತಿದ್ದ ಕಾಮುಕ

ತಮಿಳುನಾಡಿನಿಂದ ಮೈಸೂರಿಗೆ ತರಕಾರಿ, ಬಾಳೆಕಾಯಿ ಗಾಡಿಗಳ ಜೊತೆ ಬರುತ್ತಿದ್ದ ಇವರು ಕೂಲಿ ಕೆಲಸಗಳನ್ನು ಮಾಡುತ್ತಿದ್ದರು. ಕೆಲಸ ಮುಗಿದ ನಂತರ ಮೈಸೂರಿನ ನಿರ್ಜನ ಪ್ರದೇಶಗಳು ಹಾಗೂ ಚಾಮುಂಡಿಬೆಟ್ಟದ ತಪ್ಪಲಿಗೆ ಸಂಜೆಯ ವೇಳೆ ಹೋಗುತ್ತಾರೆ. ಈ ಸಂದರ್ಭದಲ್ಲಿ ಒಂಟಿಯಾಗಿ ಬರುತ್ತಿದ್ದವರನ್ನು ಹೆದರಿಸಿ ಅವರ ಬಳಿ ಇರುತ್ತಿದ್ದ ಚಿನ್ನ, ಹಣ, ಮೊಬೈಲ್‍ಗಳನ್ನು ಕಸಿದುಕೊಂಡು ಕಳುಹಿಸುತ್ತಿದ್ದರು. ಇದನ್ನೂ ಓದಿ: ಮೈಸೂರು ಗ್ಯಾಂಗ್‍ರೇಪ್ – ಆರೋಪಿ ಮೇಲಿದೆ 10 ಕೇಸ್‍ಗಳು

Source: publictv.in Source link