ಹೆದ್ದಾರಿಯಲ್ಲಿ ಭೀಕರ ಅಪಘಾತ; ಧಗಧಗನೆ ಹೊತ್ತಿ ಉರಿಯಿತು ಬೈಕ್..!

ಹೆದ್ದಾರಿಯಲ್ಲಿ ಭೀಕರ ಅಪಘಾತ; ಧಗಧಗನೆ ಹೊತ್ತಿ ಉರಿಯಿತು ಬೈಕ್..!

ಮಂಡ್ಯ: ಬೈಕ್​ ಸವಾರ ನಿಯಂತ್ರಣ ತಪ್ಪಿ ನೆಲಕ್ಕೆ ಬಿದ್ದ ಸಂದರ್ಭದಲ್ಲಿ ದ್ವಿಚಕ್ರ ವಾಹನ ಹೊತ್ತಿ ಉರಿದ ಘಟನೆ ಜಿಲ್ಲೆ ನಾಗಮಂಗಲ ಪಟ್ಟಣದ ಟಿ.ಬಿ.ವೃತ್ತದಲ್ಲಿ ನಡೆದಿದೆ.

ನೆಲಕ್ಕೆ ಬೈಕ್ ಬೀಳುತ್ತಿದ್ದಂತೆಯೇ ಬೆಂಕಿ ಹೊತ್ತಿಕೊಂಡಿದೆ. ನಡು ರಸ್ತೆಯಲ್ಲೇ ಬೈಕ್ ಧಗಧಗನೆ ಹೊತ್ತಿ ಉರಿದಿದೆ. ಅದೃಷ್ಟವಶಾತ್ ಬೈಕ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು, ಅಗ್ನಿ ಶಾಮಕ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಾಗಮಂಗಲ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Source: newsfirstlive.com Source link