ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ನಿರಾಸೆ ತಂದ ಕಿಚ್ಚ

ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ನಿರಾಸೆ ತಂದ ಕಿಚ್ಚ

ಬೆಂಗಳೂರು: ಕಿಚ್ಚ ಸುದೀಪ್ ತಮ್ಮ ಹುಟ್ಟುಹಬ್ಬವನ್ನ ಸರಳವಾಗಿ ಆಚರಿಸಿಕೊಳ್ಳೊದಾಗಿ ತಿಳಿಸಿ, ತಮ್ಮ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದಾರೆ.

ಸೆಪ್ಟಂಬರ್ 2ರಂದು ಕಿಚ್ಚ ಸುದೀಪ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ, ಆದ್ರೆ ಈ ಬಾರಿಯ ಹುಟ್ಟು ಹಬ್ಬಕ್ಕೆ ನಿಮ್ಮೆಲ್ಲರನ್ನ ಭೇಟಿಯಾಗಲಾರೆ ಅಂತ ಹೇಳಿದ್ದಾರೆ. ಕೋವಿಡ್ ಮಹಾಮಾರಿ ನಿಯಂತ್ರಿಸುವ ನಿಟ್ಟಿನಲ್ಲಿ, ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸುವುದು ನಮ್ಮೆಲ್ಲರ ಕರ್ತವ್ಯ, ಜನ ದಟ್ಟಣೆ ತಪ್ಪಿಸುವ ಕಾರಣಕ್ಕೆ ಈ ವರ್ಷವೂ ನಾನು ನನ್ನ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿಲ್ಲ, ಆದ್ದರಿಂದ ನಾನು ಯಾರ ಭೇಟಿಗೂ ಲಭ್ಯವಿರುವುದಿಲ್ಲ. ಹೀಗಾಗಿ ನಿಮ್ಮೆಲ್ಲರಲ್ಲಿ ಕ್ಷಮೆ ಕೊರುತ್ತಾ ಮುಂದೊಂದು ದಿನ ನಿಮ್ಮೆಲ್ಲರನ್ನು ಭೇಟಿ ಮಾಡುತ್ತೇನೆ ಅಂತ ಹೇಳಿದ್ದಾರೆ. ಇನ್ನು ಜನರಲ್ಲಿ ಹಾಗೂ ಅಭಿಮಾನಿ ಸ್ನೇಹಿತರಲ್ಲಿ ಕೋವಿಡ್ ಜಾಗೃತಿ ಮೂಡಿಸಲು ನಿಮ್ಮ ಸಹಕಾರವನ್ನು ಬಯಸುತ್ತೇನೆ ಅಂತಲೂ ಕಿಚ್ಚ ಸುದೀಪ್ ಮನವಿ ಮಾಡಿದ್ದಾರೆ.

Source: newsfirstlive.com Source link