ನೋ ವ್ಯಾಕ್ಸಿನೇಷನ್‌ ನೋ ರೇಷನ್, ನೋ ಪೆನ್ಷನ್ ವಿರುದ್ಧ ಡಿ.ಕೆ.ಶಿವಕುಮಾರ್ ಗರಂ

ನೋ ವ್ಯಾಕ್ಸಿನೇಷನ್‌ ನೋ ರೇಷನ್, ನೋ ಪೆನ್ಷನ್ ವಿರುದ್ಧ ಡಿ.ಕೆ.ಶಿವಕುಮಾರ್ ಗರಂ

ಚಾಮರಾಜನಗರ: ಕೊರೊನಾ ವ್ಯಾಕ್ಸಿನೇಷನ್​ಗೆ ವೇಗ ನೀಡಲು ಚಾಮರಾಜನಗರ ಜಿಲ್ಲಾಡಳಿತ ರೂಪಿಸಿರುವ ನೋ ವ್ಯಾಕ್ಸಿನೇಷನ್‌ ನೋ ರೇಷನ್. ನೋ ವ್ಯಾಕ್ಸಿನೇಷನ್‌ ನೋ ಪೆನ್ಷನ್ ಕ್ರಮಕ್ಕೆ ಕೆಪಿಸಿಸಿ ಅರ್ಧಯಕ್ಷ ಡಿ.ಕೆ.ಶಿವಕುಮಾರ್​ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿ ಅಸಮಾಧಾನ ವ್ಯಕ್ತಪಡಿಸಿದ ಅವರು, ಜಿಲ್ಲಾಡಳಿತ ಜನರಿಗೆ ಸಾಕಾಗುವಷ್ಟು ಲಸಿಕೆ ಸಂಗ್ರಹ ಮಾಡಿದೆಯಾ? ಲಸಿಕೆ ಪಡೆಯುವಂತೆ ಜನರ ಮನವೊಲಿಸಿದ್ದಾರಾ? ಮೂಲ ಸೌಕರ್ಯಗಳಾದ ಆಹಾರ ಮತ್ತು ಪಿಂಚಣಿ ನೀಡುವುದಿಲ್ಲ ಅಂತ ಹೆದರಿಸುವುದು, ಅನೈತಿಕ ಹಾಗೂ ಅಸಾಂವಿಧಾನಿಕ. ಬಿಜೆಪಿ ಸರ್ಕಾರ ಹಾಗೂ ಚಾಮರಾಜನಗರ ಜಿಲ್ಲಾಡಳಿತಕ್ಕೆ ನಾಚಿಕೆಯಾಗ್ಬೇಕು. ಆಕ್ಸಿಜನ್‌ ಪೂರೈಸಲು ಅಸಮರ್ಥರಾಗಿ 36 ಅಮಾಯಕರ ಜೀವ ತೆಗೆದಿದ್ದಾರೆ.ಲಸಿಕೆ ಪಡೆಯದವರಿಗೆ ಶಿಕ್ಷಿಸಲು ಮುಂದಾಗಿರುವವರು ಮೊದಲು ಆಕ್ಸಿಜನ್‌, ಲಸಿಕೆ, ಪರೀಕ್ಷೆ ಹಾಗೂ ಮೃತರಿಗೆ ಸೂಕ್ತ ಪರಿಹಾರ ನೀಡದಿದ್ದಕ್ಕೆ ಕ್ಷಮೆ ಕೇಳಲಿ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಇದನ್ನು ಓದಿ: ಚಾ. ನಗರದಲ್ಲಿ ಹೊಸ ರೂಲ್ಸ್ ತಂದ DC.. ವ್ಯಾಕ್ಸಿನ್ ಹಾಕಿಸಿಕೊಳ್ಳದಿದ್ರೆ ನೋ ರೇಷನ್.. ನೋ ಪೆನ್ಷನ್..

blank

Source: newsfirstlive.com Source link