ಕಿಚ್ಚ ಸುದೀಪ್​ಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ಬರ್ತ್​ಡೇ ವಿಶ್

ಕಿಚ್ಚ ಸುದೀಪ್​ಗೆ ಚಿನ್ನದ ಹುಡುಗ ನೀರಜ್ ಚೋಪ್ರಾ ಬರ್ತ್​ಡೇ ವಿಶ್

ಸ್ಯಾಂಡಲ್​ವುಡ್ ನಟ ಕಿಚ್ಚ ಸುದೀಪ್ ಇಂದು ತಮ್ಮ ಹುಟ್ಟುಹಬ್ಬ ಆಚರಿಸಿಕೊಳ್ತಿದ್ದಾರೆ. ಈ ಹಿನ್ನೆಲೆ ಗಣ್ಯಾತಿಗಣ್ಯರೇ ಸುದೀಪ್​ಗೆ ಹುಟ್ಟುಹಬ್ಬದ ಶುಭಾಶಯಗಳನ್ನ ಹೇಳಿದ್ದಾರೆ. ಈ ಮಧ್ಯೆ ಇತ್ತೀಚೆಗೆ ಟೋಕಿಯೋ ಒಲಿಂಪಿಕ್ಸ್​​ನಲ್ಲಿ ಜಾವೆಲಿನ್ ಥ್ರೋ ಕ್ರೀಡೆಯಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ ಸಹ ಸುದೀಪ್​ಗೆ ಹುಟ್ಟುಹಬ್ಬದ ಶುಭಾಶಯಗಳನ್ನ ತಿಳಿಸಿದ್ದಾರೆ.

ಇದನ್ನೂ ಓದಿ: ಸಿಎಂ ಬೊಮ್ಮಾಯಿ ಭೇಟಿಯಾದ ಕಿಚ್ಚ ಸುದೀಪ್ -ಮುಖ್ಯಮಂತ್ರಿಗಳು ಟ್ವೀಟ್ ಮಾಡಿ ಹೇಳಿದ್ದೇನು?

ವಿಡಿಯೋ ಸಂದೇಶದ ಮೂಲಕ ನೀರಜ್ ಚೋಪ್ರಾ ಸುದೀಪ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಅಷ್ಟೇ ಅಲ್ಲದೇ ಕಿಚ್ಚನ ನಟನೆಯ ವಿಕ್ರಾಂತ್ ರೋಣ ಸಿನಿಮಾಗೂ ಶುಭಹಾರೈಕೆಗಳನ್ನ ತಿಳಿಸಿದ್ದಾರೆ. ಇತ್ತೀಚೆಗೆ ಕಿಚ್ಚ ಸುದೀಪ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿಯಾಗಿದ್ದರು. ಈ ಭೇಟಿಯ ಬಗ್ಗೆ ಬಸವರಾಜ ಬೊಮ್ಮಾಯಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಕಿಚ್ಚ ಸುದೀಪ್​ ಮುಂದಿನ ಸಿನಿಮಾ ಯಾವ್ದು? ಬಿಗ್​​ ಅಪ್ಡೇಟ್ ಕೊಟ್ಟ ಕಾಲಿವುಡ್​ ನಿರ್ದೇಶಕ

Source: newsfirstlive.com Source link