‘ನೋ ವ್ಯಾಕ್ಸಿನೇಷನ್‌, ನೋ ರೇಷನ್, ನೋ ಪೆನ್ಷನ್: ಯುಟರ್ನ್​ ಹೊಡೆದ ಚಾ.ನಗರ ಜಿಲ್ಲಾಧಿಕಾರಿ

‘ನೋ ವ್ಯಾಕ್ಸಿನೇಷನ್‌, ನೋ ರೇಷನ್, ನೋ ಪೆನ್ಷನ್: ಯುಟರ್ನ್​ ಹೊಡೆದ ಚಾ.ನಗರ ಜಿಲ್ಲಾಧಿಕಾರಿ

ಚಾಮರಾಜನಗರ : ಜಿಲ್ಲೆಯಲ್ಲಿ ಕೊರೊನಾ ವ್ಯಾಕ್ಸಿನೇಷನ್​ಗೆ ವೇಗ ನೀಡಲು ಮುಂದಾಗಿದ್ದ ಜಿಲ್ಲಾಧಿಕಾರಿ ‘ನೋ ವ್ಯಾಕ್ಸಿನೇಷನ್‌ ನೋ ರೇಷನ್, ನೋ ಪೆನ್ಷನ್’ ಕ್ರಮದಡಿಯಲ್ಲಿ ಲಸಿಕೆ ಪಡೆಯದಿದ್ದರೆ ಪಡಿತರ, ಪಿಂಚಣಿ ನೀಡಲಾಗುವುದಿಲ್ಲ ಎಂದು ಆದೇಶ ಹೊರಡಸಿ ಸಾಕಷ್ಟು ಟೀಕೆಗೆ ಒಳಗಾಗಿದ್ದರು. ಈಗ ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಜಿಲ್ಲಾಧಿಕಾರಿ ಉಲ್ಟಾ ಹೊಡೆದಿದ್ದು ಈ ಕುರಿತು ಯಾವುದೇ ಅಧಿಕೃತ ಆದೇಶ ಹೊರಡಿಸಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಶೇ.100 ರಷ್ಟು ಮೊದಲ ಡೋಸ್ ವ್ಯಾಕ್ಸಿನೇಷನ್; ಪ್ರಧಾನಿ ಮೋದಿ ಶ್ಲಾಘನೆ

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಜಿಲ್ಲಾಧಿಕಾರಿ, ಕೋವಿಡ್​ ಲಸಿಕೆ ಪಡೆಯದವರಿಗೆ (ನೋ ವ್ಯಾಕ್ಸಿನೇಷನ್‌ ನೋ ರೇಷನ್, ನೋ ಪೆನ್ಷನ್ ) ಈ ಸಂಬಂಧ ಯಾವುದೇ ಅಧಿಕೃತ ಆದೇಶ ಹೊರಡಿಸಲಾಗಿಲ್ಲ, ಹೀಗಾಗಿ ಪಡಿತರದಾರರಿಗೆ ಹಾಗೂ ಪಿಂಚಣಿದಾರರಿಗೆ ಸೌಲಭ್ಯ ನಿರಾಕರಿಸುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಜಿಲ್ಲಾಧಿಕಾರಿಗಳ ಈ ಕ್ರಮ ತೆಗೆದುಕೊಂಡ ಬೆನ್ನಲ್ಲೇ ತೀವ್ರ ಚರ್ಚೆಗೊಳಗಾಗಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್​, ಕೆಪಿಸಿಸಿ ಕಾರ್ಯಾಧ್ಯಕ್ಷ ಧೃವನಾರಾಯಣ್ ಸೇರಿದಂತೆ ಇತರರು ಜಿಲ್ಲಾಧಿಕಾರಿ ಕ್ರಮ ಕುರಿತು ತೀವ್ರ ವಾಗ್ದಾಳಿ ಮಾಡಿದ್ದರು.

ಇದನ್ನೂ ಓದಿ: ಚಾ. ನಗರದಲ್ಲಿ ಹೊಸ ರೂಲ್ಸ್ ತಂದ DC.. ವ್ಯಾಕ್ಸಿನ್ ಹಾಕಿಸಿಕೊಳ್ಳದಿದ್ರೆ ನೋ ರೇಷನ್.. ನೋ ಪೆನ್ಷನ್..

ಇದನ್ನೂ ಓದಿ: ನೋ ವ್ಯಾಕ್ಸಿನೇಷನ್‌ ನೋ ರೇಷನ್, ನೋ ಪೆನ್ಷನ್ ವಿರುದ್ಧ ಡಿ.ಕೆ.ಶಿವಕುಮಾರ್ ಗರಂ

blank

Source: newsfirstlive.com Source link