ಜೆಡಿಎಸ್ ಬಾಗಿಲು ದೊಡ್ಡದಾಗಿ ತೆರೆದಿದೆ.. ಬರೋರು ಬರಬಹುದು, ಹೋಗೋರು ಹೋಗಬಹುದು- ಹೆಚ್​ಡಿಕೆ

ಜೆಡಿಎಸ್ ಬಾಗಿಲು ದೊಡ್ಡದಾಗಿ ತೆರೆದಿದೆ.. ಬರೋರು ಬರಬಹುದು, ಹೋಗೋರು ಹೋಗಬಹುದು- ಹೆಚ್​ಡಿಕೆ

ಬೆಂಗಳೂರು: ಜೆಡಿಎಸ್​ ಶಾಸಕ ಜಿ.ಟಿ.ದೇವೇಗೌಡ ಪಕ್ಷ ತೊರೆದು ಕಾಂಗ್ರೆಸ್ ಸೇರುವುದಾಗ ಹೇಳಿಕೊಂಡ ಹಿನ್ನೆಲೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ.. ಜೆಡಿಎಸ್ ಬಾಗಿಲು ದೊಡ್ಡದಾಗಿ ತೆರೆದಿದೆ.. ಬರುವವರು ಬರಬಹುದು, ಹೋಗೋರು ಹೋಗಬಹುದು ಎಂದಿದ್ದಾರೆ.

ಇದನ್ನೂ ಓದಿ: ಎತ್ತಿನಹೊಳೆ ಯೋಜನೆಯ ಪರ್ಯಾಯ ಪ್ರಸ್ತಾವನೆಯನ್ನು ತಕ್ಷಣವೇ ಕೈಬಿಡಿ- ಸಿಎಂಗೆ ಹೆಚ್​ಡಿಕೆ ಪತ್ರ

ಎರಡು ವರ್ಷದ ಹಿಂದೆನೇ ಪಕ್ಷದಿಂದ ದೂರ ಸರಿದಿದ್ದೇನೆ ಎಂದು ಅವರೇ ಹೇಳಿದ್ದಾರೆ. ಈಗ ಒಂದು ನೆಪ ಹೇಳಿ ಹೋಗೋಕೆ ಮುಂದಾಗಿದ್ದಾರೆ. ದ್ರಾಕ್ಷಿ ಕೈಗೆಟುಕದಿದ್ದಾಗ ನರಿ ಹೇಳುವ ಕಥೆಯಂತಾಗಿದೆ. ಈಗ ನನ್ನಿಂದ ಹೊರಹೋಗುವುದಾದರೆ 2008 ರಲ್ಲಿ ಯಾವ ಕಾರಣಕ್ಕಾಗಿ ಬಿಜೆಪಿಗೆ ಹೋದರು.. ಎಂದು ಶಾಸಕ ಜಿಟಿಡಿಗೆ ಕುಮಾರಸ್ವಾಮಿ ಟಾಂಗ್‌ ಕೊಟ್ಟಿದ್ದಾರೆ.

ಇದನ್ನೂ ಓದಿ: ಜಮೀರ್​ಗೆ ನನ್ನ ಮೇಲೆ ಪ್ರೀತಿ.. ಅದಕ್ಕೆ ನನ್ನ ಮೇಲೆ ಆರೋಪ ಮಾಡ್ತಾರೆ- ಹೆಚ್​ಡಿಕೆ ಟಾಂಗ್

ಮುಂದಿನ 2023ರ ವಿಧಾನಸಭಾ ಚುನಾವಣಾ ವಿಚಾರವಾಗಿ ಪ್ರತಿಕ್ರಿಯಿಸಿ.. ಮೊದಲ ಹಂತದಲ್ಲಿ 108 ಅಭ್ಯರ್ಥಿಗಳ ಹೆಸರು ಫೈನಲ್ ಮಾಡಲಾಗುವುದು.. ಇನ್ನೂ ಎಂಟತ್ತು ಅಭ್ಯರ್ಥಿಗಳ ಹೆಸರು ಪಟ್ಟಿಗೆ ಸೇರಿಕೊಳ್ಳಬಹುದು. ಸಿದ್ಧತೆ ದೃಷ್ಟಿಯಿಂದ ಎಲ್ಲರಿಗೂ ನನ್ನ ತೋಟದಲ್ಲೇ ಕಾರ್ಯಗಾರ ನಡೆಯಲಿದೆ. ಬಿಡದಿಯ ನನ್ನ ತೋಟದ ಮನೆಯಲ್ಲಿ ಎರಡು ದಿನದ ಕಾರ್ಯಗಾರ ನಡೆಯಲಿದೆ. ಮಿಷನ್ 123 ಅನ್ನೋದು ನನ್ನ ಸ್ಪಷ್ಟ ಧ್ಯೇಯ. ಮುಂದಿನ ಬಾರಿ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ಕಲಬುರುಗಿ ಸ್ಥಳೀಯ ಸಂಸ್ಥೆ ಚುನಾವಣೆಯಿಂದಲೇ ಕಾರ್ಯಕರ್ತರ ಹುಮ್ಮಸ್ಸು ಎಲ್ಲರಿಗೂ ಗೊತ್ತಾಗಲಿದೆ ಎಂದಿದ್ದಾರೆ.

ಇದನ್ನೂ ಓದಿ: ಬೊಮ್ಮಾಯಿ ನಮ್ಮ ಪ್ರಾಡಕ್ಟ್ ಎಂದ ಹೆಚ್​ಡಿಕೆಗೆ ತಿರುಗೇಟು ನೀಡಿದ ಈಶ್ವರಪ್ಪ

Source: newsfirstlive.com Source link