ಅಡುಗೆ ಅನಿಲ ದರ ಏರಿಕೆ ಖಂಡಿಸಿ NSUI ಪ್ರತಿಭಟನೆ; ಮೋದಿ ಸರ್ಕಾರದ ವಿರುದ್ಧ ಧಿಕ್ಕಾರ

ಅಡುಗೆ ಅನಿಲ ದರ ಏರಿಕೆ ಖಂಡಿಸಿ NSUI ಪ್ರತಿಭಟನೆ; ಮೋದಿ ಸರ್ಕಾರದ ವಿರುದ್ಧ ಧಿಕ್ಕಾರ

ಬೆಂಗಳೂರು: ಅಡುಗೆ ಅನಿಲ ದರ ಏರಿಕೆ ಮಾಡಿದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ಪ್ರತಿಭಟನೆ ಹಮ್ಮಿಕೊಂಡಿತ್ತು. NSUI ಕರ್ನಾಟಕದ ನೂತನ ಅಧ್ಯಕ್ಷ ಕೀರ್ತಿ ಗಣೇಶ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು.

ನಗರದ ಆನಂದ್ ರಾವ್ ಸರ್ಕಲ್​​ ಬಳಿಯ ಗಾಂಧಿ ಪ್ರತಿಮೆ ಎದುರು ನಡೆದ ಪ್ರತಿಭಟನೆಯಲ್ಲಿ NSUI ಪದಾಧಿಕಾರಿಗಳು, ಕಾರ್ಯಕರ್ತರು ಭಾಗಿಯಾಗಿದ್ದರು. ಅಡುಗೆ ಅನಿಲ ದರ ಏರಿಕೆ ಹಾಗೂ ಅಗತ್ಯ ವಸ್ತುಗಳ ದರ ಏರಿಕೆಗೆ ಕಡಿವಾಣ ಹಾಕುವಂತೆ ಒತ್ತಾಯಿಸಿದರು. ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.

ಇದನ್ನೂ ಓದಿ: ಗ್ಯಾಂಗ್​ ರೇಪ್​ ನಡೆದ ಸ್ಥಳಕ್ಕೆ ಸಿದ್ದರಾಮಯ್ಯ ಭೇಟಿ; ಮೈಸೂರು ಪೊಲೀಸರ ವಿರುದ್ಧ ಗರಂ

Source: newsfirstlive.com Source link