ಬೈಕ್​-ಗೂಡ್ಸ್​ ವಾಹನ ಮಧ್ಯೆ ಭೀಕರ ಅಪಘಾತ; ಇಬ್ಬರು ದುರ್ಮರಣ

ಬೈಕ್​-ಗೂಡ್ಸ್​ ವಾಹನ ಮಧ್ಯೆ ಭೀಕರ ಅಪಘಾತ; ಇಬ್ಬರು ದುರ್ಮರಣ

ಧಾರವಾಡ: ಬೈಕ್ ಮತ್ತು ಗೂಡ್ಸ್​ ವಾಹನದ ಮಧ್ಯೆ ಭೀಕರ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಶಿಂಗನಳ್ಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ದುರ್ಘಟನೆಯಲ್ಲಿ ಬೈಕ್​ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮಡಿವಾಳೆಪ್ಪ ಬಸಪ್ಪ ಪೂಜಾರ, ಮಹದೇವ ಸಹದೇವಪ್ಪ ಲಕ್ಕಣ್ಣನವರ ಸಾವನ್ನಪ್ಪಿದ ದುರ್ದೈವಿಗಳು. ಇವರೆಲ್ಲ ಧಾರವಾಡ ತಾಲೂಕಿನ ಬೇಲೂರ ಗ್ರಾಮದವರು ಅಂತಾ ತಿಳಿದು ಬಂದಿದೆ. ಗರಗ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದುರ್ಘಟನೆ ನಡೆದಿದೆ.

Source: newsfirstlive.com Source link