ಸಕ್ರೆಬೈಲು ಆನೆ ಬಿಡಾರದಲ್ಲಿ ಡಾಕ್ಯುಮೆಂಟರಿ ಶೂಟಿಂಗ್‍ನಲ್ಲಿ ಪವರ್ ಸ್ಟಾರ್

ಶಿವಮೊಗ್ಗ: ಸಕ್ರೆಬೈಲು ಆನೆ ಬಿಡಾರದಲ್ಲಿ ಡಾಕ್ಯುಮೆಂಟರಿ ಶೂಟಿಂಗ್‍ನಲ್ಲಿ ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಭಾಗಿಯಾಗಿದ್ದರು.

ಜಿಲ್ಲೆಯ ಸಕ್ರೆಬೈಲು ಆನೆ ಬಿಡಾರಕ್ಕೆ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಡಾಕ್ಯುಮೆಂಟರಿ ಚಿತ್ರೀಕರಣಕ್ಕಾಗಿ ಭೇಟಿ ನೀಡಿದ್ದರು. ಈ ವಿಷಯ ತಿಳಿಯುತ್ತಿದ್ದಂತೆ ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಆನೆ ಬಿಡಾರದ ಬಳಿ ಜಮಾಯಿಸಿದ್ದರು. ಇದನ್ನೂ ಓದಿ: ಮೋದಿ ಸರ್ಕಾರ ಮಾಡಿದ ತಪ್ಪನ್ನ ರಾಜ್ಯ ಸರ್ಕಾರವೂ ಮಾಡುತ್ತಿದೆ: ಕಿಮ್ಮನೆ ರತ್ನಾಕರ್

ಸಾಕ್ಷ್ಯ ಚಿತ್ರದ ಚಿತ್ರೀಕರಣದ ಸಲುವಾಗಿ ಆನೆ ಬಿಡಾರದ ಕ್ರಾಲ್ ಪ್ರದೇಶದಲ್ಲಿ ಚಿತ್ರೀಕರಣ ನಡೆಸಲಾಯಿತು. ಚಿತ್ರೀಕರಣ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕ್ರಾಲ್ ಪ್ರದೇಶಕ್ಕೆ ಮಾಧ್ಯಮದವರು ಸೇರಿದಂತೆ ಸಾರ್ವಜನಿಕರ ಪ್ರವೇಶಕ್ಕೆ ನಿಬರ್ಂಧ ವಿಧಿಸಲಾಗಿತ್ತು.

blank

ಅಭಿಮಾನಿಗಳು ಆನೆ ಬಿಡಾರದ ಬಳಿ ಜಮಾಯಿಸಿರುವ ವಿಷಯ ತಿಳಿದ ಅಪ್ಪು ಚಿತ್ರೀಕರಣದ ಬಿಡುವಿನ ವೇಳೆಯಲ್ಲಿ ಕ್ರಾಲ್ ಪ್ರದೇಶದಿಂದ ಹೊರಗೆ ಬಂದು ಅಭಿಮಾನಿಗಳಿಗೆ ಕೈ ಮುಗಿದು ನಮಸ್ಕರಿಸಿದರು. ಅಲ್ಲದೇ ಅಭಿಮಾನಿಗಳ ಜೊತೆ ಫೋಟೋ ತೆಗೆಸಿಕೊಂಡು ಮತ್ತೆ ಚಿತ್ರಿಕರಣದತ್ತ ತೆರಳಿದರು.

Source: publictv.in Source link