ಸೆ.5 ರವರೆಗೆ ರಾಜ್ಯದ ಹಲವೆಡೆ ಮಳೆ – ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಇಂದಿನಿಂದ ಸೆಪ್ಟೆಂಬರ್ 5ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಬೆಂಗಳೂರು, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನ ಭಾಗದಲ್ಲಿ ಮಳೆ ಹೆಚ್ಚಾಗಿದೆ.  ಇದನ್ನೂ ಓದಿ:ಬೆಲೆ ಏರಿಕೆ ವಿರುದ್ಧ ಸದನದ ಹೊರಗೆ, ಒಳಗೆ ಹೋರಾಟಕ್ಕೆ ಕಾಂಗ್ರೆಸ್ ಸಿದ್ದತೆ: ಡಿಕೆಶಿ

ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಜಿಲ್ಲೆಗಳಲ್ಲಿ ಕೂಡ ಇನ್ನೆರಡು ದಿನ ಸಾಧಾರಣ ಮಳೆಯಾಗಲಿದೆ. ಇಂದು ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಇದನ್ನೂ ಓದಿ: ಸರ್ಕಾರಿ ಶಾಲೆ ವಿದ್ಯಾರ್ಥಿಗಳನ್ನು ಆಕರ್ಷಿಸಲು ಗೋಡೆ ಮೇಲೆ ನಿರ್ಮಾಣವಾಯ್ತು ಉಗಿಬಂಡಿ

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಇಂದು ಯೆಲ್ಲೋ ಅಲರ್ಟ್ ಘೋಷಿಸಿರುವುದಾಗಿ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ಗೋವನ್ನು ರಾಷ್ಟ್ರೀಯ ಪ್ರಾಣಿಯನ್ನಾಗಿ ಘೋಷಿಸಿ – ಅಲಹಾಬಾದ್ ಹೈಕೋರ್ಟ್

Source: publictv.in Source link