ವಿಕ್ರಾಂತ್ ರೋಣ ‘ಡೆಡ್ ಮ್ಯಾನ್ ಆಂಥೆಮ್’ ಔಟ್- ಸ್ಟೈಲಿಶ್ ಲುಕ್‍ನಲ್ಲಿ ಸುದೀಪ್

ಬೆಂಗಳೂರು: ಸ್ಯಾಂಡಲ್‍ವುಡ್ ನಟ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್‍ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ವಿಶೇಷ ದಿನದಂದು ಸುದೀಪ್ ನಟನೆಯ ವಿಕ್ರಾಂತ್ ರೋಣ ಸಿನಿಮಾದ ಟೀಸರ್ ರಿಲೀಸ್ ಮಾಡುವ ಮೂಲಕ ಕಿಚ್ಚನ ಅಭಿಮಾನಿಗೆ ಚಿತ್ರತಂಡ ಸಿಹಿ ಸುದ್ದಿ ನೀಡಿದೆ. ಇದನ್ನೂ ಓದಿ: ಅಭಿನಯ ಚಕ್ರವರ್ತಿಗೆ 50ನೇ ಹುಟ್ಟುಹಬ್ಬದ ಸಂಭ್ರಮ

ನಿರ್ದೇಶಕ ಅನೂಪ್ ಭಂಡಾರಿ ಹಾಗೂ ಕಿಚ್ಚ ಸುದೀಪ್ ಕಾಂಬಿನೇಷನ್‍ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ. ಬಹು ಕೋಟಿ ವೆಚ್ಚದಲ್ಲಿ ತಯಾರಾಗಿರುವ ಈ ಸಿನಿಮಾದ ಬಗ್ಗೆ ಈಗಾಗಲೇ ಸಾಕಷ್ಟು ನಿರೀಕ್ಷೆ ಇದ್ದು, ಸಿನಿಮಾ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಮಧ್ಯೆ ಚಿತ್ರತಂಡ ಕಿಚ್ಚನ ಹುಟ್ಟುಹಬ್ಬದ ಪ್ರಯುಕ್ತ ವಿಕ್ರಾಂತ್ ರೋಣ ಸಿನಿಮಾದ ಡೆಡ್ ಮ್ಯಾನ್ ಆಂಥೆಮ್ ಎಂಬ ಟೀಸರ್‍ನನ್ನು ಬಿಡುಗಡೆಗೊಳಿಸಿ ಅಭಿಮಾನಿಗಳ ಕೂತುಹಲವನ್ನು ಮತ್ತಷ್ಟು ಕೆರಳಿಸಿದೆ.

sudeep

 

ಈ ಟೀಸರ್‍ನನ್ನು ನಿರ್ದೇಶಕ ನಿರೂಪ್ ಭಂಡಾರಿ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದು, ಟೀಸರ್‍ನಲ್ಲಿ ಸುದೀಪ್ ಬ್ಲಾಕ್ ಕಲರ್ ಲಾಂಗ್ ಜಾಕೆಟ್ ಹಾಗೂ ಕ್ಯಾಪ್ ತೊಟ್ಟು ಮಳೆಯಲ್ಲಿ ಸಖತ್ ಸ್ಟೈಲಿಶ್ ಆಗಿ ಕಾಣಿಸಿಕೊಂಡಿದ್ದಾರೆ. ಟೀಸರ್‌ನಲ್ಲಿ ಕಿಚ್ಚ ಆ್ಯಕ್ಷನ್ ದೃಶ್ಯವಳಿಯಲ್ಲಿ ಕಾಣಿಸಿಕೊಂಡಿದ್ದು, ಟೀಸರ್ ನೋಡಲು ಸಖತ್ ಥ್ರಿಲಿಂಗ್ ಆಗಿದೆ. ಇದನ್ನೂ ಓದಿ: ಚಂದನವನದಲ್ಲಿ ಸುದೀಪ್ ಸಿನಿ ಜರ್ನಿ

ವಿಶೇಷವೆಂದರೆ ಈ ಟೀಸರ್‍ನನ್ನು ಚಿತ್ರತಂಡ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಇಂದೇ ಬಿಡುಗಡೆಗೊಳಿಸಿದೆ. ಒಟ್ಟಾರೆ ವಿಕ್ರಾಂತ್ ರೋಣ ಟೀಸರ್ ಸಖತ್ ರಿಚ್ ಆಗಿ ಮೂಡಿಬಂದಿದ್ದು, ಸಿನಿಮಾ ಹೇಗಿರಲಿದೆ ಎಂದು ಮುಂದೆ ಕಾದು ನೋಡಬೇಕಾಗಿದೆ.

Source: publictv.in Source link