ವಿಜಯಪುರ ವಿಮಾನ ನಿಲ್ದಾಣಕ್ಕೆ 125 ಕೋಟಿ: ಗೋವಿಂದ ಕಾರಜೋಳ

ವಿಜಯಪುರ: ವಿಜಯಪುರ ವಿಮಾನ ನಿಲ್ದಾಣದ ಮುಂದುವರಿದ ಯೋಜನೆಗೆ 125 ಕೋಟಿ ರೂ. ಅನುಮೋದನೆಗೆ ಸಿಎಂ ಬಸವರಾಜ ಬೊಮ್ಮಾಯಿ ಸೂಚನೆ ಕೊಟ್ಟಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.

ಕಾರಜೊಳ ಅವರು ವಿಜಯಪುರದ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ಮಾಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದು, ವಿಜಯಪುರದಲ್ಲಿ ವಿಮಾನ ನಿಲ್ದಾಣವಾಗಬೇಕು ಎಂಬ ಬೇಡಿಕೆ ಇತ್ತು. 1976 ರಿಂದಲೇ ಈ ಕುರಿತು ಪ್ರಯತ್ನ ಮಾಡುತ್ತಿದೆ. ನಾನೇ ಹಿಂದೆ ಉಸ್ತುವಾರಿ ಸಚಿವನಿದ್ದಾಗ ಅಡಿಗಲ್ಲು ಮಾಡಿದ್ದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ತಂದಿಟ್ಟು ತಮಾಷೆ ನೋಡೋದಕ್ಕೆ ಹೇಳಿರ್ತಾರೆ – ಉಮಾಪತಿ ಬಳಿ ಕ್ಷಮೆ ಕೇಳಿದ್ದ ಭೂಗತ ಪಾತಕಿ ರವಿ

ಏರ್ ಬಸ್ ಬರುವಂತಹ ವ್ಯವಸ್ಥೆ ಕೂಡಾ ಮಾಡಲಾಗಿದೆ. 125 ಕೋಟಿ ಮುಂದುವರಿದ ಯೋಜನೆಗೆ ಅನುಮೋದನೆ ನೀಡುವುದಾಗಿ ಸಿಎಂ ಸೂಚನೆ ಕೊಟ್ಟಿದ್ದಾರೆ. ನಾವೇ ವಿಮಾನ ನಿಲ್ದಾಣ ಉದ್ಘಾಟನೆ ಮಾಡಬೇಕು ಎಂಬ ಯೋಜನೆ ಮಾಡಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಒಂದಿಷ್ಟು ಕೆಲಸಕ್ಕೆ ಅಡತಡೆಯಾಯಿತು. ಹಿಂದಿನ ಸಿಎಂ ಯಡಿಯೂರಪ್ಪ ಹಾಗೂ ನಾನು ಕೇಂದ್ರದವರನ್ನು ಭೇಟಿ ಆಗಿದ್ದೇವೆ. ಲಾಭ ನಷ್ಟ ಎಂಬ ಆಧಾರದ ಮೇಲೆ ನಾವು ಕೆಲಸ ಮಾಡುತ್ತಿಲ್ಲ ಎಂದು ನಿಕರವಾಗಿ ಹೇಳಿದ್ದಾರೆ.ಇದನ್ನೂ ಓದಿ:ತಂದೆ ಸಮಾಧಿ ಬಳಿ ಬಾಲಕಿ ಹುಟ್ಟುಹಬ್ಬ ಆಚರಣೆ

727 ಎಕರೆ ಜಿಲ್ಲಾಧಿಕಾರಿಗಳ ಮೂಲಕ ಭೂಮಿ ಸ್ವಾಧೀನ ಮಾಡಲಾಗಿತ್ತು. ಮುಂದೆ ಬಂದ ಸರ್ಕಾರಗಳು ಈ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಿಲ್ಲ. ಯಡಿಯೂರಪ್ಪ ಅವರು ಮತ್ತೆ ಸಿಎಂ ಆದ ಮೇಲೆ ಕಾಮಗಾರಿ ಪ್ರಾರಂಭ ಮಾಡಿದ್ದೇವು. 220 ಕೋಟಿ ವೆಚ್ಚದಲ್ಲಿ ವಿಮಾನ ನಿಲ್ದಾಣಕ್ಕೆ ಅನುಮೋದನೆ ಕೊಡಲಾಗಿತ್ತು. 320 ಏರ್ ಬಸ್ ಬರಬೇಕು ಎಂದು ಸಿಎಂಗೆ ಮನವಿ ಮಾಡಲಾಗಿತ್ತು. ಇನ್ನು 320 ಕೋಟಿಗೆ ಪ್ರೊಜೆಕ್ಟ್ ಕಾಸ್ಟ್ ಹೆಚ್ಚಿಗೆ ಮಾಡಲಾಗುತ್ತಿದೆ. ಎರಡು ಹಂತದಲ್ಲಿ ಟೆಂಡರ್ ಆಗಿದೆ. ಮೊದಲ ಹಂತದಲ್ಲಿ 95 ಕೋಟಿ ವೆಚ್ಚ ಹಾಗೂ ಎರಡನೇ ಹಂತದಲ್ಲಿ 125 ಕೋಟಿ ರೂ. 2.6 ಕಿಲೋ ಮೀಟರ್ ರನ್ ವೇ, 3.6 ಕಿಲೋ ಮೀಟರ್ ರನ್ ವೇ ಗೆ ಹೆಚ್ಚಿಸಲಾಗಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ಇನ್‍ ಸ್ಟಾ ಫಾಲೋವರ್ಸ್ – ಯಾರಿಗೆ ಎಷ್ಟು ಮಂದಿ ಅಭಿಮಾನಿಗಳಿದ್ದಾರೆ?

Source: publictv.in Source link