MLA ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಇಟ್ಟ ಕೇಸ್​; ತನಿಖೆ CCB ಹೆಗಲಿಗೆ ಕೊಟ್ಟ ಕಮಲ್ ಪಂತ್

MLA ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಇಟ್ಟ ಕೇಸ್​; ತನಿಖೆ CCB ಹೆಗಲಿಗೆ ಕೊಟ್ಟ ಕಮಲ್ ಪಂತ್

ಬೆಂಗಳೂರು: ಶಾಸಕ ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಇಟ್ಟ ಪ್ರಕರಣದ ತನಿಖೆಯನ್ನ ಸಿಸಿಬಿಗೆ ವರ್ಗಾವಣೆ ಮಾಡಿ ಬೆಂಗಳೂರು ಪೊಲೀಸ್ ಕಮಿಷನರ್ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

ಪೊಲೀಸ್ ಆಯುಕ್ತರ ಆದೇಶದಂತೆ ಪ್ರಕರಣದ ತನಿಖೆಯು ಸಿಸಿಬಿ ಡಿಸಿಪಿ ರವಿಕುಮಾರ್ ನೇತೃತ್ವದಲ್ಲಿ ವಿಚಾರಣೆ ನಡೆಯಲಿದೆ. ಆಗಸ್ಟ್ 12ರ ತಡರಾತ್ರಿ ಶಾಸಕರ ಮನೆ ಆವರಣಕ್ಕೆ ನುಗ್ಗಿದ್ದ ಕಿಡಿಗೇಡಿಗಳು ಕಾರುಗಳಿಗೆ ಬೆಂಕಿ ಇಟ್ಟಿದ್ದರು.

ಇದನ್ನೂ ಓದಿ: ಸತೀಶ್ ರೆಡ್ಡಿ ಕಾರಿಗೆ ಬೆಂಕಿ ಕೇಸ್​​ಗೆ ಈಗ ಪೊಲಿಟಿಕಲ್ ಟ್ವಿಸ್ಟ್!

ಪ್ರಕರಣ ದಾಖಲಿಸಿಕೊಂಡಿದ್ದ ಬೊಮ್ಮನಹಳ್ಳಿ ಪೊಲೀಸರು, ಮೂವರು ಆರೋಪಿಗಳನ್ನ ಬಂಧಿಸಿದ್ದಾರೆ. ಸಾಗರ್ ನವೀನ್, ಶ್ರೀಧರ್ ಬಂಧಿತ ಮೂವರು ಆರೋಪಿಗಳು. ಪ್ರಕರಣದ ಹಿಂದೆ ಕಾಣದ ಕೈಗಳ ಕೈವಾಡ ಇದೆ ಅನ್ನೋ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಸತೀಶ್ ರೆಡ್ಡಿ ಕಾರ್​ಗೆ ಬೆಂಕಿ; ಇಬ್ಬರು ಆರೋಪಿಗಳನ್ನ ವಶಕ್ಕೆ ಪಡೆದ ಪೊಲೀಸರು

Source: newsfirstlive.com Source link