ರಾಜ್ಯದಲ್ಲಿ ಮತ್ತೆ ಪ್ರತ್ಯೇಕ ಲಿಂಗಾಯತ ಧರ್ಮಯುದ್ಧ- ಎಂ.ಬಿ.ಪಾಟೀಲ್ ಧರ್ಮ ದಾಳಕ್ಕೆ ಕಾಂಗ್ರೆಸ್ ಮೌನ

ಬೆಂಗಳೂರು: ಪ್ರತ್ಯೇಕ ಲಿಂಗಾಯತ ಧರ್ಮದ ವಿಚಾರಕ್ಕೆ ಕೈಹಾಕಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಕೈಸುಟ್ಟುಕೊಂಡಿತ್ತು. ಆದ್ರೂ ಆ ಪಕ್ಷದ ನಾಯಕರು ಎಚ್ಚೆತ್ತುಕೊಂಡಿಲ್ಲ. ಪಂಚಮಸಾಲಿಗಳು 2ಎ ಮೀಸಲಾತಿಗಳು ಮತ್ತೆ ಹೋರಾಟ ಶುರು ಮಾಡಿರುವ ಸಂದರ್ಭದಲ್ಲಿ, ಅದೇ ಸಮುದಾಯದ ಮಾಜಿ ಮಂತ್ರಿ ಎಂ.ಬಿ.ಪಾಟೀಲ್, ಪ್ರತ್ಯೇಕ ವೀರಶೈವ ಲಿಂಗಾಯತ ಧರ್ಮದ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ. ಇದು ಪರ ವಿರೋಧ ಚರ್ಚೆಗೆ ಎಡೆ ಮಾಡಿಕೊಟ್ಟಿದೆ.

ಇತ್ತೀಚಿಗಷ್ಟೇ ಜೈಲಿಂದ ಜಾಮೀನಿನ ಮೇಲೆ ರಿಲೀಸ್ ಆಗಿರೋ ವಿನಯ್ ಕುಲಕರ್ಣಿ, ಎಲ್ಲರೂ ಕೂಡಿ ಪ್ರತ್ಯೇಕ ಧರ್ಮ ಮಾಡಿದ್ರೆ ಒಳ್ಳೆಯದೇ ಎಂದಿದ್ದಾರೆ. ಪ್ರತ್ಯೇಕ ಧರ್ಮದ ಕಾರಣವೊಂದೇ ಕಾಂಗ್ರೆಸ್ ಸೋಲಿಗೆ ಕಾರಣ ಆಗಿರಲಿಲ್ಲ ಅಂತಲೂ ವ್ಯಾಖ್ಯಾನಿಸಿದ್ದಾರೆ. ಈ ವಿಚಾರದಲ್ಲಿ ಸಿದ್ದರಾಮಯ್ಯ ಎಚ್ಚರಿಕೆಯ ನಡೆ ಇಟ್ಟಿದ್ದಾರೆ. ಪ್ರತ್ಯೇಕ ಧರ್ಮದ ವಿಚಾರವಾಗಿ ನನ್ನನ್ನೇನು ಕೇಳಬೇಡಿ. ಎಂಬಿ ಪಾಟೀಲರನ್ನೇ ಕೇಳಿ ಎನ್ನುವ ಮೂಲಕ ಅಂತರ ಕಾಯ್ದುಕೊಂಡಿದ್ದಾರೆ. ಇದನ್ನೂ ಓದಿ: ಉಡುಪಿಯ ವಾರಾಂತ್ಯ ಕರ್ಫ್ಯೂ ಬಗ್ಗೆ ಸಿಎಂ ಪುನರ್ ಪರಿಶೀಲಿಸಲಿ- ಸಚಿವ ಕೋಟ

ಇತ್ತ ಕಾಂಗ್ರೆಸ್ಸಿಗರ ಧರ್ಮ ದಾಳಕ್ಕೆ ಸಚಿವ ಬಿ.ಸಿ.ಪಾಟೀಲ್ ಕಿಡಿಕಾರಿದ್ದಾರೆ. ಎಂ.ಬಿ.ಪಾಟೀಲ್ ಈಗಾಗಲೇ ಇಂಥ ಪ್ರಯತ್ನ ಮಾಡಿ ‘ಕೈ’ ಸುಟ್ಟುಕೊಂಡಿದ್ದಾರೆ. ಮತ್ತೆನಾದ್ರೂ ಪ್ರಯತ್ನ ಮಾಡಿದ್ರೆ ಸರ್ವನಾಶ ಆಗ್ತಾರೆ ಅಂತಾ ಎಚ್ಚರಿಸಿದ್ದಾರೆ. ಸಚಿವ ನಿರಾಣಿ ಮಾತ್ರ, ಸಮಸ್ತ ಲಿಂಗಾಯತ ಧರ್ಮದ ಬೇಡಿಕೆ ಇದ್ರೆ ಕೇಳಲಿ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ನೀವು ಹೇಳಿದಂತೆಯೇ ಎಲ್ಲವನ್ನೂ ಮಾಡಿದ್ದೀನಿ, ನೀವು ಏನು ಮಾಡಿದ್ರಿ ಹೇಳಿ?: ಸಚಿವ ಗೋಪಾಲಯ್ಯ

Source: publictv.in Source link