ನಿಷೇಧ ಇದ್ದರೂ ಗೋವಾ CMಗೆ ಸವದತ್ತಿ ಯಲ್ಲಮ್ಮನ ದರ್ಶನ ಭಾಗ್ಯ; ಭಕ್ತರು ಆಕ್ರೋಶ

ನಿಷೇಧ ಇದ್ದರೂ ಗೋವಾ CMಗೆ ಸವದತ್ತಿ ಯಲ್ಲಮ್ಮನ ದರ್ಶನ ಭಾಗ್ಯ; ಭಕ್ತರು ಆಕ್ರೋಶ

ಬೆಳಗಾವಿ: ಕೊವೀಡ್ ಹಿನ್ನೆಲೆಯಲ್ಲಿ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಭಕ್ತರ ನಿಷೇಧ ಇದೆ. ಹೀಗಿದ್ದೂ ಗೋವಾ ಸಿಎಂ ಪ್ರಮೋದ್ ಸಾವಂತ್​​ಗೆ ಯಲ್ಲಮ್ಮನ ದರ್ಶನ ಭಾಗ್ಯ ಸಿಕ್ಕಿದೆ.

blank

ದೇವಾಲಯದ ಆಡಳಿತ ಮಂಡಳಿ ಪ್ರಮೋದ್ ಸಾವಂತ್ ಅವರಿಗೆ ಪೊಲೀಸ್ ಭದ್ರತೆಯಲ್ಲಿ ದೇವಿಯ ದರ್ಶನ ಮಾಡಿಸಿದ್ದಾರೆ. ಇನ್ನು ಗೋವಾ ಸಿಎಂಗೆ ಸ್ಥಳೀಯ ಶಾಸಕ ಆನಂದ ಮಾಮನಿ ಸಾಥ್ ನೀಡಿದರು.

blank

ಜನ ಸಮಾನ್ಯರಿಗೆ ನಿರ್ಬಂಧ ಹೇರಿ ಗೋವಾ ಸಿಎಂಗೆ ದರ್ಶನಕ್ಕೆ ಅವಕಾಶ ನೀಡಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಭಾವಿಗಳಿಗೊಂದು, ಜನಸಾಮಾನ್ಯರಿಗೊಂದು ಕಾನೂನು ಇದೆಯಾ? ಅಂತಾ ಪ್ರಶ್ನೆ ಮಾಡಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಕಳೆದ 2 ವರ್ಷಗಳಿಂದ ದೇವಾಲಯಕ್ಕೆ ಬಾಗಿಲು ಹಾಕಲಾಗಿದೆ.

Source: newsfirstlive.com Source link