ಬೆಳ್ಳಂ ಬೆಳಗ್ಗೆ ನಾಡ ದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಕಿಚ್ಚ ಸುದೀಪ್​

ಬೆಳ್ಳಂ ಬೆಳಗ್ಗೆ ನಾಡ ದೇವತೆ ಚಾಮುಂಡೇಶ್ವರಿ ದೇವಿ ದರ್ಶನ ಪಡೆದ ಕಿಚ್ಚ ಸುದೀಪ್​

ಮೈಸೂರು : 50ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿರುವ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್​ ನಾಡ ದೇವತೆ ದರ್ಶನ ಪಡೆದಿದ್ದಾರೆ. ಇಂದು ಮುಂಜಾನೆ ಚಾಮುಂಡಿ ಬೆಟ್ಟಕ್ಕೆ ಭೇಟಿ‌ ನೀಡಿದ ಅವರು ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದಿದ್ದಾರೆ.

blank

ಬಳಿಕ ಜನ್ಮದಿನದ ವಿಶೇಷವಾಗಿ ಚನ್ನಪಟ್ಟಣದ ಗೌಡಗೆರೆಗೆ ನಟ ಕಿಚ್ಚ ಸುದೀಪ್ ದಂಪತಿ ಸಮೇತವಾಗಿ ಆಗಮಿಸಿಲಿದ್ದು, 68 ಅಡಿ ಎತ್ತರದ ಚಾಮುಂಡೇಶ್ವರಿ ವಿಗ್ರಹ ವೀಕ್ಷಣೆ ಹಾಗೂ ಪೂಜೆ ಸಲ್ಲಿಸಲಿದ್ದಾರೆ. ಇನ್ನೇನು ಕಲವೇ ಹೊತ್ತಲ್ಲಿ ಸುದೀಪ್​ ಗೌಡಗೆರೆಗೆ ಆಗಮಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಅಭಿಮಾನಿಗಳು ಸೇರುವ ನಿರೀಕ್ಷೆ ಇರುವುದರಿಂದ ದೇವಸ್ಥಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

blank

Source: newsfirstlive.com Source link