ಸುಂದರ್ ರಾಜ್, ಸರ್ಜಾ ಫ್ಯಾಮಿಲಿ ಸದಾ ಒಂದಾಗಿರುತ್ತದೆ: ಧ್ರುವ ಸರ್ಜಾ

ಬೆಂಗಳೂರು: ಇಷ್ಟು ದಿನ ಕಾತುರದಿಂದ ಕಾಯುತ್ತಿದ್ದ ನಟ ಚಿರಂಜೀವಿ ಸರ್ಜಾ ಅಭಿಮಾನಿಗಳಿಗೆ ಜ್ಯೂನಿಯರ್ ಚಿರು ನಿಜವಾದ ಹೆಸರನ್ನು ಇಂದು ಬಹಿರಂಗ ಪಡಿಸುವ ಮೂಲಕ ಮೇಘನಾ ರಾಜ್ ಸಿಹಿಸುದ್ದಿ ನೀಡಿದ್ದಾರೆ. ಈ ವೇಳೆ ಆ್ಯಕ್ಷನ್ ಪ್ರಿನ್ಸ್ ನಟ ಧ್ರುವ ಸರ್ಜಾ, ಸುಂದರ್ ರಾಜ್ ಹಾಗೂ ಸರ್ಜಾ ಕುಟುಂಬ ಯಾವಾಗಲೂ ಒಂದಾಗಿರುತ್ತದೆ ಎಂದು ಹೇಳಿದ್ದಾರೆ.

ಬೆಂಗಳೂರಿನ ಖಾಸಗಿ ಹೋಟೆಲ್‍ನಲ್ಲಿ ಕುಟುಂಬಸ್ಥರೆಲ್ಲಾ ಸೇರಿ ಜ್ಯೂನಿಯರ್ ಚಿರುಗೆ ರಾಯನ್ ರಾಜ್ ಸರ್ಜಾ ಎಂದು ನಾಮಕರಣಮಾಡಿದ್ದು, ಇದೇ ವೇಳೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಧ್ರುವ ಸರ್ಜಾ, ನಮ್ಮ ಅಣ್ಣನ ಮಗನ ಹೆಸರು ರಾಯನ್ ರಾಜ್ ಸರ್ಜಾ. ಆ ಒಂದು ಹೆಸರಿನಲ್ಲಿಯೇ ಸುಂದರ್ ರಾಜ್ ಅವರ ಫ್ಯಾಮಿಲಿ ಹಾಗೂ ಸರ್ಜಾ ಕುಟುಂಬ ಯಾವಾಗಲೂ ಒಂದಾಗಿಯೇ ಇರುತ್ತದೆ. ಕೆಲವು ಯೂಟ್ಯೂಬ್ ಅಥವಾ ಬೇರೆ ಯಾವುದಾದರ ಮೂಲಕ ಭಿನ್ನಾಭಿಪ್ರಾಯವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದರೆ ದಯವಿಟ್ಟು ಮಾಡಬೇಡಿ. ನಾವು ಯಾವತ್ತಿಗೂ ಭಿನ್ನಾಭಿಪ್ರಾಯಗಳನ್ನು ಮಾಡಿಕೊಳ್ಳುವುದಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಚಿರು, ಮೇಘನಾ ಪುತ್ರ ಈಗ ‘ರಾಯನ್ ರಾಜ್ ಸರ್ಜಾ’

druva sarja

ನಂತರ ಈ ಸಮಯದಲ್ಲಿ ನಾನು ನನ್ನ ಚಿಕ್ಕಪ್ಪ, ನನ್ನ ಅಣ್ಣನನ್ನು ನೆನಪಿಸಿಕೊಳ್ಳಲಿ ಇಚ್ಛಿಸುತ್ತೇನೆ. ಸುಂದರ್ ರಾಜ್, ಪ್ರಮೀಳಾ ಜೋಷಾಯ್ ಅವರು ಹಾಗೂ ನನ್ನ ಅತ್ತಿಗೆ ಎಲ್ಲರೂ ಸಂತಸದಿಂದ ಇದ್ದಾರೆ. ನಾನು ಕೂಡ ಖುಷಿಯಾಗಿದ್ದೇನೆ. ದಿನ ದಿನ ನಾವು ಎಲ್ಲವನ್ನು ಸುಧಾರಿಸಿಕೊಳ್ಳುತ್ತಿದ್ದೇವೆ. ರಾಯನ್‍ಗೆ ಎಲ್ಲರೂ ಆಶೀರ್ವಾದಮಾಡಿ. ರಾಯನ್ ಎಂದರೆ ಸಂಸ್ಕೃತದಲ್ಲಿ ಯುವರಾಜ ಎಂದರ್ಥ. ಅವನು ಯುವರಾಜ ಎಂದು ಹೆಸರಿಟ್ಟಿರುವುದಲ್ಲ. ಅವನು ಯುವರಾಜನಂತೆಯೇ ಇರುತ್ತಾನೆ ಎಂದು ಹೇಳಿದ್ದಾರೆ. ಇದನ್ನೂ ಓದಿ:ಸ್ವರ್ಗದ ಬಾಗಿಲನ್ನು ತೆಗೆದುಕೊಟ್ಟ ಯುವರಾಜನೇ ರಾಯನ್: ಮೇಘನಾ ರಾಜ್

Source: publictv.in Source link