ಜೊಲ್ಲೆ ಭ್ರಷ್ಟಾಚಾರ ಆರೋಪ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ- ಲಕ್ಷ್ಮಿ ಹೆಬ್ಬಾಳ್ಕರ್

ಜೊಲ್ಲೆ ಭ್ರಷ್ಟಾಚಾರ ಆರೋಪ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ- ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ : ಭ್ರಷ್ಟಾಚಾರ ಆರೋಪ ಹೊತ್ತಿರುವ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಧ್ವನಿ ಎತ್ತುವುದು ನಮ್ಮ ಪಕ್ಷದ ಸ್ಟ್ಯಾಂಡ್ ಆಗಿದೆ ಆಗಿದೆ ಎಂದು ಕಾಂಗ್ರೆಸ್​ ನಾಯಕಿ ಲಕ್ಷ್ಮಿ ಹೆಬ್ಬಾಳ್ಕರ್​ ಹೇಳಿದ್ದಾರೆ.

ಪಾಲಿಕೆ ಚುನಾವಣೆಯ ನಿಮಿತ್ತ ಮತದಾನ ಮಾಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾನು ಒಬ್ಬ ಮಹಿಳೆಯಾಗಿ ಖಂಡಿತವಾಗಿ ಜೊಲ್ಲೆ ಭ್ರಷ್ಟಾಚಾರ ಆರೋಪ ಕುರಿತು ಅಧಿವೇಶನದಲ್ಲಿ ಧ್ವನಿ ಎತ್ತುತ್ತೇನೆ. ನಾನು ಮಾತ್ರವಲ್ಲ ಇಡೀ ಕಾಂಗ್ರೆಸ್ ಪಕ್ಷ ಇದರ ಬಗ್ಗೆ ಧ್ವನಿ ಎತ್ತುತ್ತದೆ, ಇದರ ವಿರುದ್ಧ ಧ್ವನಿ ಎತ್ತುವುದು ನಮ್ಮ ಪಕ್ಷದ ಸ್ಟ್ಯಾಂಡ್​ ಆಗಿದೆ ಎಂದಿದ್ದಾರೆ.

ಪ್ರತ್ಯೇಕ ಲಿಂಗಾಯತ ಹೋರಾಟ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಪಂಚಮಸಾಲಿ ಮೀಸಲಾತಿ, ಪ್ರತ್ಯೇಕ ಲಿಂಗಾಯತ ಧರ್ಮ‌ ಹೋರಾಟದಲ್ಲಿ ನಾನು ಭಾಗಿಯಾಗಿದ್ದೀನಿ. ಈಗ ಎರಡೂ ಹೋರಾಟ ಪಕ್ಕಕ್ಕೆ ಇಟ್ಟುಕೊಂಡು, ನಮ್ಮ ಸಮಾಜಕ್ಕೆ ಸದ್ಯ ಯಾವುದು ಉತ್ತಮ ಅನಿಸತ್ತೋ ಅದನ್ನ ಮಾಡಲಿ ಎಂದು ಮುಖ್ಯಮಂತ್ರಿಗಳಿಗೆ ಒತ್ತಾಯಿಸುತ್ತೇನೆ ಎಂದರು.

ಆ ಹೋರಾಟ, ಈ ಹೋರಾಟ ಎಂದು ಕೆದಕಲು ಹೋಗುವುದಿಲ್ಲ. ನಮ್ಮ ಸಮಾಜದಲ್ಲೂ ಬಡವರಿದ್ದಾರೆ, ದುಡಿದು ತಿನ್ನುವವರು ಇದ್ದಾರೆ. ನಮ್ಮ ಸಮಾಜದ ಬಡವರಿಗೂ ನ್ಯಾಯ ಸಿಗಲಿ ಎಂದು ಮುಖ್ಯಮಂತ್ರಿ ಗಳಿಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.

ಇದನ್ನೂ ಓದಿ: ‘ಯಾವ ಪ್ರತ್ಯೇಕ ಲಿಂಗಾಯತ ಧರ್ಮದ ಹೋರಾಟವೂ ಇಲ್ಲ’ -ಮಾಜಿ ಸಚಿವ ಎಂ.ಬಿ ಪಾಟೀಲ್​​​ ಹೀಗಂದಿದ್ಯಾಕೆ?

Source: newsfirstlive.com Source link