ಶೂಟಿಂಗ್‍ನಲ್ಲಿ ಕಂಚು – ಭಾರತದ ಪರ ದಾಖಲೆ ಬರೆದ ಅವನಿ

ಟೋಕಿಯೋ: ಪ್ಯಾರಾಲಂಪಿಕ್ಸ್ ಮಹಿಳಾ ವಿಭಾಗದ 50 ಮೀಟರ್ ಏರ್ ರೈಫಲ್ ಶೂಟಿಂಗ್ ವಿಭಾಗದಲ್ಲಿ ಭಾರತದ ಶೂಟರ್ ಅವನಿ ಲೇಖರಾ ಕಂಚಿನ ಪದಕ ಗೆದ್ದಿದ್ದಾರೆ. ಈ ಮೂಲಕ ಒಂದೇ ಪ್ಯಾರಾಲಂಪಿಕ್ಸ್ ಕ್ರೀಡಾಕೂಟದಲ್ಲಿ ಅವಳಿ ಪದಕ ಗೆದ್ದ ಭಾರತದ ಮೊದಲ ಮಹಿಳಾ ಕ್ರೀಡಾಪಟು ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ.

ಈ ಮೊದಲು ಅವನಿ ಮಹಿಳಾ ವಿಭಾಗದ 100 ಮೀಟರ್ ಏರ್ ರೈಫಲ್ ಶೂಟಿಂಗ್‍ನಲ್ಲಿ ಚಿನ್ನದ ಪದಕ ಗೆದ್ದಿದ್ದರು. ಇದೀಗ 50 ಮೀಟರ್ ಏರ್ ರೈಫಲ್ ಶೂಟಿಂಗ್ ಫೈನಲ್‍ನಲ್ಲಿ ಒಟ್ಟು 445.9 ಅಂಕಗಳೊಂದಿಗೆ ಮೂರನೇ ಸ್ಥಾನ ಪಡೆದುಕೊಂಡು, ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದನ್ನೂ ಓದಿ: ಪ್ಯಾರಾಲಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನ- ಜಾವೆಲಿನ್ ಎಸೆದು ಚಿನ್ನ ಪಡೆದ ಸುಮಿತ್

ಇಂದು ಬೆಳಗ್ಗೆ ಹೈಜಂಪ್ ವಿಭಾಗದಲ್ಲಿ ಭಾರತದ ಪ್ರವೀಣ್ ಕುಮಾರ್ ಬೆಳ್ಳಿ ಪದಕ ಗೆದ್ದುಕೊಂಡಿದ್ದರು. ಈ ಮೂಲಕ ಟೋಕಿಯೋ ಒಲಿಂಪಿಕ್ಸ್‍ನಲ್ಲಿ ಭಾರತ ಗೆದ್ದ ಪದಕಗಳ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಇದನ್ನೂ ಓದಿ: ಬೆಳ್ಳಿ ಪದಕ ಗೆದ್ದ ಪ್ರವೀಣ್ ಕುಮಾರ್‌ಗೆ ಮೋದಿ ವಿಶ್

ಪ್ರಧಾನಿ ಅಭಿನಂದನೆ
ಟೋಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಕ್ರೀಡಾಕೂಟದ ಹೈಜಂಪ್ ಮತ್ತು ಶೂಟಿಂಗ್ ಸ್ಪರ್ಧೆಯಲ್ಲಿ ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದ ಪ್ರವೀಣ್ ಕುಮಾರ್ ಮತ್ತು ಅವನಿ ಲೇಖರಾ ಅವರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಅಭಿನಂದಿಸಿದ್ದಾರೆ.

blank

ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, “ಪ್ಯಾರಾಲಿಂಪಿಕ್ಸ್ ಬೆಳ್ಳಿ ಹಾಗೂ ಕಂಚಿನ ಪದಕ ಗೆದ್ದ ಪ್ರವೀಣ್ ಕುಮಾರ್ ಮತ್ತು ಅವನಿ ಲೇಖರಾ ಬಗ್ಗೆ ಹೆಮ್ಮೆ ಪಡುತ್ತೇನೆ. ಈ ಪದಕವು ಅವರ ಕಠಿಣ ಪರಿಶ್ರಮ ಮತ್ತು ಸಾಟಿಯಿಲ್ಲದ ಸಮರ್ಪಣೆಯ ಫಲವಾಗಿದೆ. ಅವರಿಗೆ ಅಭಿನಂದನೆಗಳು. ಅವರ ಭವಿಷ್ಯದ ಪ್ರಯತ್ನಗಳಿಗೆ ಶುಭ ಹಾರೈಕೆಗಳು ಎಂದಿದ್ದಾರೆ. ಇದನ್ನೂ ಓದಿ: ಜಾವೆಲಿನ್ ಎಸೆತ ಭಾರತಕ್ಕೆ ಅವಳಿ ಪದಕ

Source: publictv.in Source link