ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ಕೇಸ್​​; ಒಬ್ಬ ಆರೋಪಿ ಅರೆಸ್ಟ್​​

ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನ ಕೇಸ್​​; ಒಬ್ಬ ಆರೋಪಿ ಅರೆಸ್ಟ್​​

ಮೈಸೂರು: ಹಾಡುಹಗಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣ ಸಂಬಂಧ ಮೈಸೂರು ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಮೈಸೂರು ರಿಂಗ್​ ರೋಡ್​​ ಬಳಿ ಪೊಲೀಸರು ಆರೋಪಿಗೆ ಬಲೆ ಬೀಸಿ ಅರೆಸ್ಟ್​ ಮಾಡಿದ್ದಾರೆ.

ಇಂದು ಸಂಜೆ ಆರ್.ಎಸ್ ನಾಯ್ಡು ನಗರದಲ್ಲಿ ಕಾಲೇಜು ವಿದ್ಯಾರ್ಥಿನಿ ಒಬ್ಬರ ಮೇಲೆ ಅತ್ಯಾಚಾರ ಯತ್ನ ನಡೆದಿದೆ ಎನ್ನಲಾಗಿತ್ತು. ವಿದ್ಯಾರ್ಥಿನಿಯನ್ನ ಕೆ.ಆರ್.ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಘಟನಾ ಸ್ಥಳಕ್ಕೆ ಎನ್.ಆರ್ ಠಾಣೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಸ್ಥಳಕ್ಕೆ ಡಿಸಿಪಿ ಪ್ರದೀಪ್ ಗುಂಟಿ ಕೂಡ ಭೇಟಿ ನೀಡಿದ್ದಾರೆ. ಈ ಬೆನ್ನಲ್ಲೀಗ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ: ಮೈಸೂರಲ್ಲಿ ಮತ್ತೊಂದು ಅತ್ಯಾಚಾರಕ್ಕೆ ಯತ್ನ ಆರೋಪ; ಕೇಸ್ ದಾಖಲು

Source: newsfirstlive.com Source link