ಕೋವಿಡ್ ಭೀತಿ ಮಧ್ಯೆಯೂ ರಸ್ತೆ ಮಧ್ಯೆಯೇ ಬರ್ತ್​ಡೇ ಆಚರಣೆ; ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್

ಕೋವಿಡ್ ಭೀತಿ ಮಧ್ಯೆಯೂ ರಸ್ತೆ ಮಧ್ಯೆಯೇ ಬರ್ತ್​ಡೇ ಆಚರಣೆ; ಅರ್ಧ ಗಂಟೆಗೂ ಹೆಚ್ಚು ಕಾಲ ಟ್ರಾಫಿಕ್ ಜಾಮ್

ಹಾಸನ: ಕೋವಿಡ್ ನಿಯಮ ಉಲ್ಲಂಘಿಸಿ ಬಿಜೆಪಿ ಜಿಲ್ಲಾಧ್ಯಕನ ಹೆಚ್.ಕೆ.ಸುರೇಶ್​ ಬರ್ತ್ ಡೇ ಆಚರಣೆ ಮಾಡಿದ ಘಟನೆ ಹಾಸನ ಜಿಲ್ಲೆ ಬೇಲೂರು ಪಟ್ಟಣದಲ್ಲಿ ನಡೆದಿದೆ. ಘಟನೆಯಿಂದಾಗಿ ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ‌ ಟ್ರಾಫಿಕ್ ಜಾಮ್ ಉಂಟಾಗಿತ್ತು ಎನ್ನಲಾಗಿದೆ.

blank

ಹುಟ್ಟುಹಬ್ಬದ ಸೆಲಿಬ್ರೇಷನ್​ನಲ್ಲಿ ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡದೆ ನೂರಾರು ಮಂದಿ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಇದರಿಂದ ಬೇಲೂರು ಪಟ್ಟಣದ ನೆಹರು ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಹಾಸನ ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದ್ದರೂ ಇವರು ಹುಟ್ಟುಹಬ್ಬ ಆಚರಿಸಿಕೊಂಡಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷನ‌ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

Source: newsfirstlive.com Source link